ರಾಜ್ಯ

ಶಿವಮೊಗ್ಗ: ದೆವ್ವ ಬಿಡಿಸುವುದಾಗಿ ಮನಸೋ ಇಚ್ಛೆ ಥಳಿತ; ಅಸ್ವಸ್ಥಗೊಂಡು ಮಹಿಳೆ ಸಾವು

ಆರೋಪಿ ಮೃತ ಗೀತಮ್ಮಳನ್ನು ಭಾನುವಾರ ರಾತ್ರಿ 9.30ರಿಂದ ಸೋಮವಾರ ಬೆಳಗಿನ ಜಾವ 1.30 ರವರೆಗೂ ಹಳೇ ಜಂಭರಘಟ್ಟೆ ಚೌಡಮ್ಮನ ದೇವಸ್ಥಾನದವರೆಗೂ ದೆವ್ವ ಬಿಟ್ಟಿಲ್ಲ ಎಂದು ಹೊಡೆದುಕೊಂಡು ಬಂದಿದ್ದಾಳೆ.

ಶಿವಮೊಗ್ಗ: ದೆವ್ವ ಬಿಡಿಸುವುದಾಗಿ ಮನಸೋ ಇಚ್ಛೆ ಥಳಿತ; ಅಸ್ವಸ್ಥಗೊಂಡು ಮಹಿಳೆ ಸಾವು
ಮೃತ ಮಹಿಳೆ ಗೀತಮ್ಮ
Published On :

ಶಿವಮೊಗ್ಗ: ದೆವ್ವ ಬಿಡಿಸುವುದಾಗಿ ಹೇಳಿ ಮಹಿಳೆಯೊಬ್ಬರನ್ನು ಮನಸೋ ಇಚ್ಛೆ ಥಳಿಸಿ ಕೊಂದಿರುವ ಘಟನೆ ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆಯಲ್ಲಿ ರಾತ್ರಿ ನಡೆದಿದೆ.

ಹೊಸ ಜಂಬರಘಟ್ಟೆ ಗ್ರಾಮದ ಗೀತಮ್ಮ (55) ಮೃತ ಮಹಿಳೆ. ಕಳೆದ 15 ದಿನಗಳಿಂದ ಅಸ್ವಸ್ಥರಾಗಿದ್ದ ಗೀತಮ್ಮ ಅವರನ್ನು ಅವರ ಮಗ ಸಂಜಯ್, ಆಶಾ (45) ಎಂಬ ಮಹಿಳೆಯ ಬಳಿಗೆ ಕರೆದೊಯ್ದಿದ್ದಾರೆ.

ಮಹಿಳೆ ಆ ಪ್ರದೇಶದಲ್ಲಿ ಭೂತ ಬಿಡಿಸುವ ಕೆಲಸ ಮಾಡುತ್ತಾಳೆಂದು ಹೆಸರುವಾಸಿಯಾಗಿದ್ದಳು ಎನ್ನಲಾಗಿದೆ. ಗೀತಮ್ಮಗೆ ದೆವ್ವ ಹಿಡಿದಿದೆ ಎಂದು ಆಶಾ ಹೇಳಿಕೊಂಡಿದ್ದು, ಆರೋಪಿ ಮೃತ ಗೀತಮ್ಮಳನ್ನು ಭಾನುವಾರ ರಾತ್ರಿ 9.30ರಿಂದ ಸೋಮವಾರ ಬೆಳಗಿನ ಜಾವ 1.30 ರವರೆಗೂ ಹಳೇ ಜಂಭರಘಟ್ಟೆ ಚೌಡಮ್ಮನ ದೇವಸ್ಥಾನದವರೆಗೂ ದೆವ್ವ ಬಿಟ್ಟಿಲ್ಲ ಎಂದು ಹೊಡೆದುಕೊಂಡು ಬಂದಿದ್ದಾಳೆ.

ತಲೆ ಮೇಲೆ ಕಲ್ಲು ಹೊರಿಸಿ ಮರವೊಂದರ ಕೆಳಗೆ ಪೂಜೆ ಮಾಡಿದ ಕೆಲ ಹೊತ್ತಲ್ಲೆ ಗೀತಮ್ಮಳ ಕೂಗಾಡಲು ಶುರು ಮಾಡಿದ್ದಾರೆ. ಬಳಿಕ ಕಾಲುವೆಯಲ್ಲಿದ್ದ ತಣ್ಣೀರೆರಚಿದ್ದಾರೆ. ಈ ವೇಳೆ ಗೀತಮ್ಮ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಬಳಿಕ ದೆವ್ವ ಬಿಟ್ಟಿದೆ. ಮನೆಗೆ ಕರೆದುಕೊಂಡು ಹೋಗು ಎಂದು ಸೂಚಿಸಿದ್ದಾಳೆ.

ಮನೆಗೆ ಹೋದ ಬಳಿಕವೂ ಗೀತಮ್ಮ ಅವರಿಗೆ ಪ್ರಜ್ಞೆ ಬಂದಿಲ್ಲ. ನಂತರ ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆಶಾ, ಆಕೆಯ ಪತಿ ಸಂತೋಷ್ ಮತ್ತು ಗೀತಮ್ಮ ಅವರ ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.