ರಾಜ್ಯ

ವಿಜಯಪುರ ಕೆನರಾ ಬ್ಯಾಂಕ್ ದರೋಡೆ ಪ್ರಕರಣ: ಮತ್ತೆ 12 ಜನರ ಬಂಧನ

ಕಳೆದ ತಿಂಗಳು ವಶಕ್ಕೆ ಪಡೆದಿದ್ದ ಮಾಜಿ ಶಾಖಾ ವ್ಯವಸ್ಥಾಪಕ ವಿಜಯಕುಮಾರ್ ಮಿರಿಯಾಲ ಸೇರಿದಂತೆ ಮೂವರು ಆರೋಪಿಗಳ ವಿಚಾರಣೆಯ ನಂತರ ಈಗ ಮತ್ತೆ 12 ಆರೋಪಿಗಳನ್ನು ಬಂಧಿಸಲಾಗಿದೆ.

ವಿಜಯಪುರ ಕೆನರಾ ಬ್ಯಾಂಕ್ ದರೋಡೆ ಪ್ರಕರಣ: ಮತ್ತೆ 12 ಜನರ ಬಂಧನ
ಬಂಧಿತ ವಿಜಯಕುಮಾರ್ ಮಿರಿಯಾಲ ಹಾಗೂ ಇತರ ಆರೋಪಿಗಳು
Published On :

ವಿಜಯಪುರ: ವಿಜಯಪುರ ಜಿಲ್ಲೆಯ ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಲ್ಲಿ 53.26 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 12 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಕಳೆದ ತಿಂಗಳು ವಶಕ್ಕೆ ಪಡೆದಿದ್ದ ಮಾಜಿ ಶಾಖಾ ವ್ಯವಸ್ಥಾಪಕ ವಿಜಯಕುಮಾರ್ ಮಿರಿಯಾಲ ಸೇರಿದಂತೆ ಮೂವರು ಆರೋಪಿಗಳ ವಿಚಾರಣೆಯ ನಂತರ ಈಗ ಮತ್ತೆ 12 ಆರೋಪಿಗಳನ್ನು ಬಂಧಿಸಲಾಗಿದೆ.

ಇದರೊಂದಿಗೆ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಪೊಲೀಸರು ಇಲ್ಲಿಯವರೆಗೆ 39.26 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ 39 ಕೆಜಿ ಕರಗಿದ ಚಿನ್ನ 1.16 ಕೋಟಿ ರೂ. ನಗದು ಮತ್ತು ಐದು ಕಾರುಗಳು ಸೇರಿವೆ ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.

ಕಳೆದ ಮೇ 25 ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನಲ್ಲಿರುವ ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಲ್ಲಿ ದರೋಡೆ ನಡೆದಿದ್ದು, ಇಲ್ಲಿ ಮಿರಿಯಾಲ ಈ ಹಿಂದೆ ಶಾಖಾ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು.

ಬ್ಯಾಂಕ್ ಲಾಕರ್‌ನಿಂದ 53.26 ಕೋಟಿ ರೂ. ಮೌಲ್ಯದ 58.97 ಕೆಜಿ ಚಿನ್ನಾಭರಣ ಮತ್ತು 5.2 ಲಕ್ಷ ರೂ. ನಗದು ಕಳವು ಮಾಡಲಾಗಿದೆ ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.