ಯಾದಗಿರಿ: ಜಾತಿ ನಿಂದನೆ ಕೇಸ್ ಬೆದರಿಕೆ, ಭಯದಿಂದ ಯುವಕ ಆತ್ಮಹತ್ಯೆ; ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಂದೆ ನಿಧನ
ಕಳೆದ ಒಂದು ವಾರದ ಹಿಂದೆ, ವಡಗೇರದಲ್ಲಿ ಜಮೀನಿನ ದಾರಿಯ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬವೊಂದರ ಜೊತೆ ಜಗಳ ಉಂಟಾಗಿತ್ತು.

ಯಾದಗಿರಿ: ಜಮೀನಿಗೆ ಹೋಗುವ ದಾರಿಯ ವಿಚಾರವಾಗಿ ದಲಿತ ಸಮುದಾಯದವರು ಜಾತಿ ನಿಂದನೆ ಕೇಸ್ ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದರಿಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆಯ ವಡಿಗೆರಾ ತಾಲ್ಲೂಕಿನಲ್ಲಿ ನಡೆದಿದೆ. ಈ ವಿಚಾರ ತಿಳಿದು ಯುವಕನ ತಂದೆ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೆಹಬೂಬ್ (21) ಹಾಗೂ ಹೃದಯಾಘಾತದಿಂದ ಮೃತಪಟ್ಟವರನ್ನು ಸೈಯದ್ (50) ಎಂದು ಗುರುತಿಸಲಾಗಿದೆ.
ಕಳೆದ ಒಂದು ವಾರದ ಹಿಂದೆ, ವಡಗೇರದಲ್ಲಿ ಜಮೀನಿನ ದಾರಿಯ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬವೊಂದರ ಜೊತೆ ಜಗಳ ಉಂಟಾಗಿತ್ತು. ಈ ಜಗಳವು ಮೆಹಬೂಬ್ ಮತ್ತು ಆ ಕುಟುಂಬದ ನಡುವೆ ಜಮೀನಿನ ಮೂಲಕ ಹಾದುಹೋಗುವ ವಿಷಯಕ್ಕೆ ಸಂಬಂಧಿಸಿತ್ತು.
ಈ ಕುರಿತು ಗ್ರಾಮದ ಮುಖಂಡರು ನ್ಯಾಯ ಪಂಚಾಯತ್ ಮಾಡಿ ಬಗೆಹರಿಸಿದ್ದರು. ಆದರೆ, ಮತ್ತೆ ಅದೇ ವಿಚಾರವಾಗಿ ಜಾತಿ ನಿಂದನೆ ಕೇಸ್ ಮಾಡುತ್ತೇವೆ ಎಂದು ದಲಿತ ಸಮುದಾಯದವರು ಹೆದರಿಸಿದ್ದಾರೆ. ಕೇಸ್ ದಾಖಲಾದರೆ ಮನೆ ಮಾನ-ಮರ್ಯಾದೆ ಹೋಗುತ್ತದೆ ಎಂಬ ಭಯದಿಂದ ಬುಧವಾರ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



