ರಾಜ್ಯ

ಬಿಜೆಪಿ ವಿರುದ್ಧ ಜಾಹೀರಾತು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ

ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಇಂದು ಮಧ್ಯಂತರ ತಡೆ ನೀಡಿದೆ.

ಬಿಜೆಪಿ ವಿರುದ್ಧ ಜಾಹೀರಾತು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ
ಹೈಕೋರ್ಟ್, ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ಶುಕ್ರವಾರ​ ಮಧ್ಯಂತರ ತಡೆ ನೀಡಿದೆ.

2023ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ದಿನ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಇಂದು ಮಧ್ಯಂತರ ತಡೆ ನೀಡಿದೆ.

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್​ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹಿರಾತು ನೀಡಿತ್ತು.

ಈ ಜಾಹೀರಾತಿನಿಂದ ಪಕ್ಷದ ಗೌರವಕ್ಕೆ ದಕ್ಕೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಹೆಸರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.