ರಾಜ್ಯ

ಬೆಂಗಳೂರು: 4ನೇ ಮಹಡಿಯಿಂದ ಕಬ್ಬಿಣದ ಸರಳುಗಳ ಮೇಲೆ ಬಿದ್ದ ವ್ಯಕ್ತಿ, ಪ್ರಾಣಾಪಾಯದಿಂದ ಪಾರು

ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನಾಲ್ಕನೇ ಮಹಡಿಯಿಂದ ಕಬ್ಬಿಣದ ಸರಳುಗಳ ಮೇಲೆ ವ್ಯಕ್ತಿಯೊಬ್ಬ ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಬೆಂಗಳೂರು: 4ನೇ ಮಹಡಿಯಿಂದ ಕಬ್ಬಿಣದ ಸರಳುಗಳ ಮೇಲೆ ಬಿದ್ದ ವ್ಯಕ್ತಿ, ಪ್ರಾಣಾಪಾಯದಿಂದ ಪಾರು
ಸಂಗ್ರಹ ಚಿತ್ರ
Published On :

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನಾಲ್ಕನೇ ಮಹಡಿಯಿಂದ ಕಬ್ಬಿಣದ ಸರಳುಗಳ ಮೇಲೆ ವ್ಯಕ್ತಿಯೊಬ್ಬ ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಪವನ್ ಪ್ರತಾಪ್ (ಹಸರು ಬದಲಿಸಲಾಗಿದೆ) ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ. ವ್ಯಕ್ತಿ ಮಹಡಿ ಮೇಲಿಂದ ನೇರವಾಗಿ ಕಬ್ಬಿಣದ ಸರಳುಗಳ ಮೇಲೆ ಬಿದ್ದಿದ್ದು, ಎದೆ ಹಾಗೂ ಹೊಟ್ಟೆಗೆ ಹಾಗೂ ಬಲ ತೊಡೆಗೆ ಕಬ್ಬಿಣದ ಸರಳುಗಳು ಚುಚ್ಚಿತ್ತು.

ಕೂಡಲೇ ಸ್ಥಳದಲ್ಲಿದ್ದವರು ರಕ್ಷಣೆಗೆ ಧಾವಿಸಿ, ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ವ್ಯಕ್ತಿ ಪ್ರಜ್ಞೆಹೀನ ಸ್ಥಿತಿಯಲ್ಲಿದ್ದು, ಗಂಭೀರ ಸ್ಥಿತಿಗೆ ಜಾರಿದ್ದರು.

ಒಂದು ಸರಳು ವ್ಯಕ್ತಿಯ ಹೃದಯಕ್ಕೆ ಅರ್ಧ ಸೆಂ.ಮೀ. ದೂರದಲ್ಲಿ ಚುಚ್ಚಿತ್ತು. ಅದನ್ನು ಬಹಳ ಎಚ್ಚರಿಕೆಯಿಂದ ಹೊರತೆಗೆದೆವು. ಬಲ ಮೂತ್ರಪಿಂಡಕ್ಕೂ ಹಾನಿಯಾಗಿತ್ತು. ಇದಲ್ಲದೆ, ಅನೇಕ ಆಂತರಿಕ ಗಾಯಗಳಿಗೆ ಚಿಕಿತ್ಸೆ ನೀಡಲಾಯಿತು ಎಂದು ಕಾರ್ಡಿಯೋಥೊರಾಸಿಕ್ ಸರ್ಜನ್ ಡಾ. ಭಾರತಿ ಭಟ್ ಅವರು ಹೇಳಿದ್ದಾರೆ.

ಶಸ್ತ್ರಚಿಕಿತ್ಸೆಯ ನಂತರ, ಪವನ್ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಯಿತು. ನಿಕಟ ಮೇಲ್ವಿಚಾರಣೆಗಾಗಿ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಯಿತು. ಅವರ ಸ್ಥಿತಿ ಕ್ರಮೇಣ ಸುಧಾರಿಸುತ್ತಿದ್ದಂತೆ ಮರುದಿನ ಅವರನ್ನು ವೆಂಟಿಲೇಟರ್‌ನಿಂದ ತೆಗೆದುಹಾಕಲಾಯಿತು. 11 ದಿನಗಳ ಕಾಲ ಆಸ್ಪತ್ರೆಯ ಉನ್ನತ ತಂಡದ ಮೇಲ್ವಿಚಾರಣೆಯಲ್ಲಿ ಆತ ಚೇತರಿಸಿಕೊಂಡಿದ್ದು, ಜೂನ್ 22 ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.