ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತ: ಮೂವರು ಸ್ಥಳದಲ್ಲೇ ಸಾವು
ಮಡವಿನಕೊಡಿ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳುವಾಗ ದುರಂತ ಸಂಭವಿಸಿದೆ.

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಇಂದು ಭಾನುವಾರ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ತಡೆಗೋಡೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಬೆಳಗಿನ ಜಾವ ಘಟನೆ ನಡೆದಿದೆ. ಚಿಕ್ಕನಾಯಕಹಳ್ಳಿಯ ತಮ್ಮಣ್ಣಗೌಡ (56ವ), ಪುತ್ರ ಮುತ್ತುರಾಜ್ (28ವ) ಮತ್ತು ಹಾಸನ ಮೂಲದ ಚಾಲಕ ಸಚಿನ್ (27ವ) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಂಜು ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮಡವಿನಕೊಡಿ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ ಬೆಂಗಳೂರಿಗೆ ತೆರಳುವಾಗ ದುರಂತ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ತಿರುಪತಿ ಬಳಿ ಭೀಕರ ಅಪಘಾತ: ಟೆಂಪೋ ಟ್ರಾವೆಲರ್ ಗೆ ಲಾರಿ ಡಿಕ್ಕಿ; ಕರ್ನಾಟಕದ ಮೂವರು ದುರ್ಮರಣ, 12 ಮಂದಿಗೆ ಗಾಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


