ಧರ್ಮಸ್ಥಳ ಪ್ರಕರಣ: ಸುಳ್ಳು ಮಾಹಿತಿ ವಿಡಿಯೋ ಪ್ರಸಾರ ಆರೋಪ; Youtuber ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು
ಪ್ರಕರಣದ ದೂರುದಾರರು ನೂರಾರು ಮೃತದೇಹಗಳನ್ನು ಬಲವಂತವಾಗಿ ಹೂತು ಹಾಕಿದ್ದೇನೆಂದು ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದರು.

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗುತ್ತಿರುವ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳಿ ಮಾಹಿತಿಯೊಂದಿಗೆ ವಿಡಿಯೋ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣದ ದೂರುದಾರರು ನೂರಾರು ಮೃತದೇಹಗಳನ್ನು ಬಲವಂತವಾಗಿ ಹೂತು ಹಾಕಿದ್ದೇನೆಂದು ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದರು.
ಇದರ ಬೆನ್ನಲ್ಲೇ ಸಮೀರ್ ಎಂ.ಡಿ. ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಒಟ್ಟು ಪ್ರಕರಣದ ಬಗ್ಗೆ ಕೃತಕ ಬುದ್ಧಿಮತ್ತೆ (AI) ರಚಿತ ಮತ್ತು ಸುಳ್ಳು ಮಾಹಿತಿಗಳನ್ನು ಒಳಗೊಂಡ ವಿಡಿಯೋವನ್ನು ಪ್ರಸಾರ ಮಾಡಿದ್ದು. ಸುಳ್ಳು ಮಾಹಿತಿಯೊಂದಿಗೆ ವೀಡಿಯೊ ಅಪ್‌ಲೋಡ್ ಮಾಡಿದ್ದಕ್ಕಾಗಿ ಸಮೀರ್ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 192, 240, 353(1)(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ತಿಳಿಸಿದ್ದಾರೆ.
ಸಾರ್ವಜನಿಕರನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸುವ ಉದ್ದೇಶದಿಂದ ಈ ವಿಡಿಯೋ ಪ್ರಸಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಶೇಷ ತನಿಖಾ ತಂಡವನ್ನು ರಚಿಸುವ ಅಥವಾ ಪ್ರಕರಣದ ತನಿಖೆಗಾಗಿ ಪ್ರಸ್ತುತ ತನಿಖಾ ಅಧಿಕಾರಿಯನ್ನು ಬದಲಾಯಿಸುವ ಬೇಡಿಕೆಗಳಿವೆ ಎಂದು ಎಸ್ಪಿ ಹೇಳಿದರು. "ಪ್ರಕರಣದಲ್ಲಿ ದೂರುದಾರರು ಇದರ ಬಗ್ಗೆ ಏನು ಹೇಳುತ್ತಾರೆ ಮತ್ತು ಅವರ ಪರವಾಗಿ ಪ್ರತಿನಿಧಿಸುವ ವಕೀಲರು ಸಹ ಇದರ ಬಗ್ಗೆ ತಿಳಿದಿದ್ದಾರೆಯೇ ಎಂಬುದು ಇನ್ನೂ ತಿಳಿದಿಲ್ಲ" ಎಂದು ಎಸ್ಪಿ ಹೇಳಿದರು.
ಅಲ್ಲದೆ ಧರ್ಮಸ್ಥಳ ಪೊಲೀಸ್ ಠಾಣಾ 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ದಿನ ದಿನಾಂಕ 11.07.2025 ರಂದು ಒಂದು ಪ್ರಕರಣ ದಾಖಲಾಗಿದ್ದು, ಎರಡು ಪ್ರತ್ಯೇಕ ವಿಚಾರಣೆಗಳನ್ನೂ ಪ್ರಾರಂಭಿಸಲಾಗಿರುತ್ತದೆ.
ದಿನಾಂಕ 11.07.2025 ರಂದು ಸಾಕ್ಷಿ ದೂರುದಾರರ ಪರವಾದ ವಕೀಲರು ಪತ್ರಿಕಾಗೋಷ್ಠಿಯಲ್ಲಿ ನೀಡಿರುವ ಕೆಲವು ಹೇಳಿಕೆಗಳು ವಾಸ್ತವಿಕವಾಗಿ ತಪ್ಪಾಗಿದೆ ಎಂದು ಪೊಲೀಸರು ತಿಳಿಸಿದ್ದು, ಸದ್ರಿ ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸಲು ಅಥವಾ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (SIT)ವನ್ನು ರಚಿಸಲು ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ಕೆಲವು ಗುಂಪನ್ನು ಪ್ರತಿನಿಧಿಸುತ್ತಿರುವ ವ್ಯಕ್ತಿಗಳು ಹೇಳುತ್ತಿದ್ದು, ಈ ಬಗ್ಗೆ ಸಾಕ್ಷಿ ದೂರುದಾರರ ಪರವಾದ ವಕೀಲರಿಗೆ ಅರಿವಿದೆಯೇ ಎಂಬುದನ್ನು ಹಾಗೂ ಈ ಬಗ್ಗೆ ಸಾಕ್ಷಿ ದೂರುದಾರರ ನಿಲುವೇನು ಎಂಬುದನ್ನು ದೃಢಪಡಿಸಿಕೊಳ್ಳಬೇಕಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



