ವಿಜಯಪುರ: ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ, ಬಂಧನ!
ಈ ಆರೋಪಿಗಳು ನಗರ ಹೊರವಲಯದ ಇಟ್ಟಿಂಗಿಹಾಳ ರಸ್ತೆಯಲ್ಲಿ ಇರುವ ಮಾಹಿತಿ ಆಧರಿಸಿ ಪೊಲೀಸರು ಅಲ್ಲಿಗೆ ತೆರಳಿದ್ದಾರೆ.

ವಿಜಯಪುರ: ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ವಿಜಯಪುರದಲ್ಲಿ ಮಂಗಳವಾರ ನಡೆದಿದೆ.
ನಗರದ ಎಸ್.ಎಸ್ ರಸ್ತೆಯ ಅಮರ ವರ್ಷಿಣಿ ಸೌಹಾರ್ದ ಸಹಕಾರಿ ಬ್ಯಾಂಕಿನ ಆವರಣದಲ್ಲಿ ಸೋಮವಾರ ರೌಡಿ ಶೀಟರ್ ಸುಶೀಲ್ ಕುಮಾರ ಕಾಳೆ ಎಂಬಾತನ ಮೇಲೆ ನಾಲ್ಕೈದು ದುಷ್ಕರ್ಮಿಗಳು ಚಾಕು, ಮಚ್ಚಿನಿಂದ ಹೊಡೆದು ಪರಾರಿಯಾಗಿದ್ದರು.
ಈ ಆರೋಪಿಗಳು ನಗರ ಹೊರವಲಯದ ಇಟ್ಟಿಂಗಿಹಾಳ ರಸ್ತೆಯಲ್ಲಿ ಇರುವ ಮಾಹಿತಿ ಆಧರಿಸಿ ಪೊಲೀಸರು ಅಲ್ಲಿಗೆ ತೆರಳಿದ್ದಾರೆ.
ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ನಾಡ ಪಿಸ್ತೂಲ್ ನಿಂದ ಗುಂಡು ಹಾರಿಸಿ, ಬೈಕಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಪ್ರತಿಯಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು,ಈ ವೇಳೆ ಆರೋಪಿಗಳ ಕಾಲಿಗೆ ಗುಂಡು ತಗುಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಆರೋಪಿ ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ತಪ್ಪಿಸಿಕೊಂಡಿರುವ ಇನ್ನುಳಿದ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



