ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ: ಸಾರಿಗೆ ನಿಗಮಗಳ ನೌಕರರಿಂದ ಆಗಸ್ಟ್ 5ಕ್ಕೆ ಮುಷ್ಕರ
ರಾಜ್ಯದ ಕೆಎಸ್ಆರ್ಟಿಸಿ,, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.

ಬೆಂಗಳೂರು: ಸಾರಿಗೆ ನೌಕರರಿಗೆ 38 ತಿಂಗಳಿನಿಂದ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.
ರಾಜ್ಯದ ಕೆಎಸ್ಆರ್ಟಿಸಿ,, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯಗೆ ನೋಟಿಸ್
ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಇ-ಮೇಲ್ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ ಎಂದು ತಿಳಿಸಿದ್ದಾರೆ.
4 ನಿಗಮದ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



