ರಾಜ್ಯ

ಇಂದು ಸಚಿವ ಸಂಪುಟ ಸಭೆ: ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ಸಾಧ್ಯತೆ..!

ಕೊಪ್ಪಳ, ವಿಜಯಪುರ, ರಾಯಚೂರು ಮತ್ತು ಇತರ ಸ್ಥಳಗಳ ಪ್ರಾಥಮಿಕ ಅಧ್ಯಯನವನ್ನು ಕೈಗೊಳ್ಳಲು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ (ಎನ್‌ಟಿಪಿಸಿ) ಸಂಪುಟವು ಅನುಮತಿ ನೀಡುವ ಸಾಧ್ಯತೆಗಳಿವೆ.

ಇಂದು ಸಚಿವ ಸಂಪುಟ ಸಭೆ: ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ಸಾಧ್ಯತೆ..!
ಸಚಿವ ಸಂಪುಟ ಸಭೆ
Published On :

ಬೆಂಗಳೂರು: ಗ್ರಾಮಸ್ಥರ ವಿರೋಧದ ನಡುವೆಯೂ ಗೂರುವಾರ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಕೊಪ್ಪಳ, ವಿಜಯಪುರ, ರಾಯಚೂರು ಮತ್ತು ಇತರ ಸ್ಥಳಗಳ ಪ್ರಾಥಮಿಕ ಅಧ್ಯಯನವನ್ನು ಕೈಗೊಳ್ಳಲು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ (ಎನ್‌ಟಿಪಿಸಿ) ಸಂಪುಟವು ಅನುಮತಿ ನೀಡುವ ಸಾಧ್ಯತೆಗಳಿವೆ

ಈ ವರ್ಷದ ಕೇಂದ್ರ ಬಜೆಟ್‌ನಲ್ಲಿ, ಭಾರತದ ದೀರ್ಘಕಾಲೀನ ಇಂಧನ ಪರಿವರ್ತನಾ ಕಾರ್ಯತಂತ್ರದ ಭಾಗವಾಗಿ ಪರಮಾಣು ಶಕ್ತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಕೇಂದ್ರ ಸರ್ಕಾರವು 2047 ರ ವೇಳೆಗೆ 100 ಗಿಗಾವ್ಯಾಟ್ ಪರಮಾಣು ವಿದ್ಯುತ್ ಸಾಮರ್ಥ್ಯದ ಗುರಿಯನ್ನು ಹೊಂದಿದೆ. ಪಳೆಯುಳಿಕೆ ಇಂಧನಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವ ಮೂಲಕ ದೇಶದಲ್ಲಿ ಪರಮಾಣು ಪ್ರಮುಖ ವಿದ್ಯುತ್ ಮೂಲವಾಗಬೇಕೆಂದು ಬಯಸುತ್ತಿದೆ.

ಇಂದು ನಡೆಯುವ ಸಚಿವ ಸಂಪುಟದಲ್ಲಿ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ 11 ಮಂದಿಯನ್ನು ಬಲಿ ಪಡೆದ ಕಾಲ್ತುಳಿತದ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ'ಕುನ್ಹಾ ಅವರು ಸಲ್ಲಿಸಿದ ವರದಿಯ ಕುರಿತಂತೆಯೂ ಚರ್ಚೆ ನಡೆಯುವ ಸಾಧ್ಯತೆಗಳಿವೆ.

ದೇವನಹಳ್ಳಿ ಬಳಿ ರಕ್ಷಣಾ ಮತ್ತು ಏರೋಸ್ಪೇಸ್ ಪಾರ್ಕ್‌ಗಾಗಿ 1,777 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಕುರಿತಂತೆಯೂ ಚರ್ಚೆ ನಡೆಯುವ ಸಾಧ್ಯತೆಗಳಿದೆ.

ಇದಲ್ಲದೆ, ಆಂಧ್ರಪ್ರದೇಶ ಸರ್ಕಾರ ಕೈಗಾರಿಕೋದ್ಯಮಿಗಳನ್ನು ಓಲೈಸಲು ಪ್ರಯತ್ನಿಸುತ್ತಿರುವ ಕುರಿತಂತೆಯೂ ಚರ್ಚೆ ನಡೆಸುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.