ರಾಜ್ಯ

ರೌಡಿಶೀಟರ್ ಬಿಕ್ಲ ಶಿವ ಹತ್ಯೆ: BJP ಶಾಸಕ ಬೈರತಿ ಬಸವರಾಜ್‌ ಗೆ ಪೊಲೀಸ್ ನೋಟಿಸ್

ಪೊಲೀಸ್ ನೋಟಿಸ್‌ನಿಂದ ಸದ್ಯ ಬೈರತಿ ಬಸವರಾಜ್ ಅವರಿಗೆ ಈಗ ಬಂಧನ ಭೀತಿ ಎದುರಾಗಿದೆ.

ರೌಡಿಶೀಟರ್ ಬಿಕ್ಲ ಶಿವ ಹತ್ಯೆ: BJP ಶಾಸಕ ಬೈರತಿ ಬಸವರಾಜ್‌ ಗೆ ಪೊಲೀಸ್ ನೋಟಿಸ್
ಬೈರತಿ ಬಸವರಾಜ್
Published On :

ಬೆಂಗಳೂರು: ರೌಡಿಶೀಟರ್ ಶಿವ ಪ್ರಕಾಶ್ ಅಲಿಯಾಸ್ ಬಿಕ್ಲ ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಗುರುವಾರ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರಿಗೆ ನೋಟಿಸ್ ನೀಡಿದ್ದಾರೆ.

ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಹಾಲಿ ಶಾಸಕ ಬೈರತಿ ಬಸವರಾಜು ಅವರಿಗೆ ಭಾರತಿ ನಗರ ಪೊಲೀಸರು ನೋಟಿಸ್ ನೀಡಿದ್ದು, ಕೊಲೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ನೋಟಿಸ್ ತಲುಪಿದ ಕೂಡಲೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದ್ದು, ಬೈರತಿ ಬಸವರಾಜ್ ಅವರ ಪುತ್ರ ನೀರಜ್ ಅವರು ನೋಟಿಸ್ ಸ್ವೀಕರಿಸಿದ್ದಾರೆ.

ಪೊಲೀಸ್ ನೋಟಿಸ್‌ನಿಂದ ಸದ್ಯ ಬೈರತಿ ಬಸವರಾಜ್ ಅವರಿಗೆ ಈಗ ಬಂಧನ ಭೀತಿ ಎದುರಾಗಿದೆ.

ಭಾರತಿ ನಗರದಲ್ಲಿ ಕಳೆದ ಮಂಗಳವಾರ ರಾತ್ರಿ ಶಿವ ಪ್ರಕಾಶ್ ನನ್ನು ಆತನ ತಾಯಿಯ ಎದುರೇ ಕೊಚ್ಚಿ ಕೊಲೆ ಮಾಡಲಾಗಿದೆ.

ಪ್ರಕರಣದ ಸಂಬಂಧ ಪೊಲೀಸರು ಇಂದು ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಫ್ರೆಡ್ರಿಕ್ ಅವರನ್ನು ಬಂಧಿಸಿ ನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಅವರನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.