ರಾಜ್ಯ

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಡಿಸಿಎಂ ಡಿ.ಕೆ ಶಿವಕುಮಾರ್

ಮೈಸೂರಿನಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಡಿಸಿಎಂ ಡಿ.ಕೆ ಶಿವಕುಮಾರ್
ಡಿಕೆ ಶಿವಕುಮಾರ್ — online desk
Published On :

ಮೈಸೂರು: "ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರ ಕಣ್ಣಿಗೆ ಕಾಣುತ್ತಿವೆ. ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮೈಸೂರಿನಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

"ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ. ಈ ಗ್ಯಾರಂಟಿ ಯೋಜನೆಗಳು ಸುಳ್ಳು, ಇದರಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಮಂತ್ರಿಗಳಿಂದ ಹಿಡಿದು ರಾಜ್ಯದ ಬಿಜೆಪಿ ನಾಯಕರವರೆಗೂ ಎಲ್ಲರೂ ಟೀಕೆ ಮಾಡಿದರು. ನಂತರ ನಡೆದ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಹರಿಯಾಣ ಸೇರಿದಂತೆ ಬೇರೆ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗಿಂತ ಮೊದಲೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದಾರೆ. ಇತ್ತೀಚೆಗೆ ಬಿಹಾರದಲ್ಲೂ ನಮ್ಮದೇ ಗ್ಯಾರಂಟಿ ಯೋಜನೆ ನಕಲು ಮಾಡಿದ್ದಾರೆ" ಎಂದು ಟೀಕಿಸಿದರು.

"ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರುವ ಕಾರಣ ಜನರ ಬದುಕಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ. ಆ ಮೂಲಕ ರಾಜ್ಯದ ಜನರ ಋಣ ತೀರಿಸಲಾಗುತ್ತಿದೆ" ಎಂದರು.

"ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ನಾವು ಮಾಡಿದ ಕೆಲಸಗಳು ಜನರ ಕಣ್ಣಿಗೆ ಕಾಣುತ್ತಿವೆ. ನಾವು ಇಲ್ಲಿಗೆ ಜನರಿಂದ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ. ನಿಮ್ಮ ಋಣ ತೀರಿಸಲು ಬಂದಿದ್ದೇವೆ. ನಮ್ಮ ಸರ್ಕಾರ ಬಂದ ನಂತರ ನಾನು ಹಾಗೂ ಸಿದ್ದರಾಮಯ್ಯ ಅವರು ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಿ ಐದು ವರ್ಷದ ಗೃಹಲಕ್ಷ್ಮೀ ಯೋಜನೆ ಹಣವನ್ನು ತಾಯಿಯ ಪಾದಕ್ಕೆ ಅರ್ಪಿಸಿ ಆಶೀರ್ವಾದ ಪಡೆದೆವು" ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

"ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ನಡೆಸಿದರು. ನಮ್ಮ ರಾಜ್ಯದಲ್ಲಿ ರಾಹುಲ್ ಗಾಂಧಿ ಯಾತ್ರೆ ನಡೆಸಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದರು" ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.