ರಾಜ್ಯ

ಕರಡಿ ದಾಳಿ: ಗ್ರೀನ್ ಕಾರಿಡಾರ್ ಮೂಲಕ ಆಸ್ಪತ್ರೆಗೆ ಸಾಗಣೆ, ವೃದ್ಧ ವ್ಯಕ್ತಿಯ ಜೀವ ಉಳಿಸಿದ ಅರಣ್ಯಾಧಿಕಾರಿ..!

ನಿಗದಿತ ಸಮಯದೊಳಗೆ ಆಸ್ಪತ್ರೆ ತಲುಪಬೇಕೆಂದು ವೈದ್ಯರು ಹೇಳಿದ್ದರು. ಅದು ಗೋಲ್ಡನ್ ಅವರ್ ಆಗಿತ್ತು 1 ಗಂಟೆಯೊಳಗೆ ರೋಗಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಕರಡಿ ದಾಳಿ: ಗ್ರೀನ್ ಕಾರಿಡಾರ್ ಮೂಲಕ ಆಸ್ಪತ್ರೆಗೆ ಸಾಗಣೆ, ವೃದ್ಧ ವ್ಯಕ್ತಿಯ ಜೀವ ಉಳಿಸಿದ ಅರಣ್ಯಾಧಿಕಾರಿ..!
ಕರಡಿ ದಾಳಿಯಿಂದ ಗಾಯಗೊಂಡ ವ್ಯಕ್ತಿ.
Published On :

ಹುಡ್ಸ (ಉತ್ತರ ಕನ್ನಡ): ಕರಡಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧ ವ್ಯಕ್ತಿಯನ್ನು ಗ್ರೀನ್ ಕಾರಿಡಾರ್ ಮೂಲಕ ಆಸ್ಪತ್ರೆಗೆ ಸಾಗಿಸಿ, ಅರಣ್ಯಾಧಿಕಾರಿಯೊಬ್ಬರು ಜೀವ ಉಳಿಸಿದ್ದಾರೆ.

ಜೂನ್ 21, 2025 ರಂದು, ಇದೆಗಲಿ ಗ್ರಾಮದ ನಿವಾಸಿ ತುಕಾರಾಮ್ ಗೋವಿಂದ್ ದೇಸಾಯಿ ಅವರ ಮೇಲೆ ಕರಡಿಯೊಂದು ದಾಳಿ ಮಾಡಿದ್ದು, ಈ ವೇಳೆ ಗೋವಿಂದ್ ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಗಂಭೀರವಾಗಿ ಗಾಯಗೊಂಡಿದ್ದರಿಂದ ಹೆಚ್ಚು ನಡೆಯಲು ಸಾಧ್ಯವಾಗದೆ ಅರಣ್ಯ ಪ್ರದೇಶದಲ್ಲೇ ರೋಧಿಸುತ್ತಾ ಕುಳಿತಿದ್ದಾರೆ. ಈ ವೇಳೆ ಗಸ್ತು ತಿರುಕುತ್ತಿದ್ದ ಅರಣ್ಯ ವೀಕ್ಷಕರೊಬ್ಬರು ಗೋವಿಂದ್ ದೇಸಾಯಿಯವನ್ನು ನೋಡಿದ್ದು, ಕೂಡಲೇ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಈ ವೇಳೆ ಅರಣ್ಯಾಧಿಕಾರಿ ಪ್ರವೀಣ್ ಛಲವಾದಿಯವರು ಸ್ಥಳಕ್ಕೆ ಆ್ಯಂಬುಲೆನ್ಸ್ ಕರೆಸಿದ್ದು, ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಧಾರವಾಡದ ಎಸ್‌ಡಿಎಂಗೆ ಸ್ಥಳಾಂತರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಈ ವೇಳೆ ಪ್ರವೀಣ್ ಅವರು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿ, ಗ್ರೀನ್ ಕಾರಿಡಾರ್ ಮೂಲಕ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಪರಿಣಾಮ ವೃದ್ಧ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಿಗದಿತ ಸಮಯದೊಳಗೆ ಆಸ್ಪತ್ರೆ ತಲುಪಬೇಕೆಂದು ವೈದ್ಯರು ಹೇಳಿದ್ದರು. ಅದು ಗೋಲ್ಡನ್ ಅವರ್ ಆಗಿತ್ತು 1 ಗಂಟೆಯೊಳಗೆ ರೋಗಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪ್ರವೀಣ್ ಅವರು ಹೇಳಿದ್ದಾರೆ.

ಇನ್ನು ವೃದ್ಧ ವ್ಯಕ್ತಿಯ ಚಿಕಿತ್ಸೆಗೆ ಅರಣ್ಯಾಧಿಕಾರಿ ತಮ್ಮ ಕೈಯಿಂದ ಬಿಲ್ ಕಟ್ಟಿದ್ದರು. ನಂತರ ಇಲಾಖೆಯಿಂದ ಮರುಪಾವತಿಸಲಾಯಿತು. ಇದೀಗ ವ್ಯಕ್ತಿ ಆರೋಗ್ಯವಾಗಿದ್ದಾರೆಂದು ವೈದ್ಯರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.