ಬೆಂಗಳೂರು- ಸೇಲಂ ಹೆದ್ದಾರಿಯಲ್ಲಿ ಸರಣಿ ಅಪಘಾತ: 7 ವರ್ಷದ ಮಗು ಸೇರಿ ಮೂವರ ದುರ್ಮರಣ
ಕುರುಬರಪಳ್ಳಿ ಬಳಿ 12ಕ್ಕೂ ಹೆಚ್ಚು ವಾಹನಗಳು ಒಂದರ ಮೇಲೊಂದರಂತೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚೆನ್ನೈ: ಬೆಂಗಳೂರು-ಸೇಲಂ ಹೆದ್ದಾರಿಯಲ್ಲಿ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ 7 ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಕುರುಬರಪಳ್ಳಿ ಬಳಿ 12ಕ್ಕೂ ಹೆಚ್ಚು ವಾಹನಗಳು ಒಂದರ ಮೇಲೊಂದರಂತೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಸ್ತೆ ಕಾಮಗಾರಿಯಿಂದಾಗಿ ವಾಹನಗಳು ನಿಧಾನವಾಗಿ ಸಾಗುತ್ತಿದ್ದಾಗ ಲಾರಿಯೊಂದು ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಲಾರಿ, 2 ಕಾರು ಹಾಗೂ 1 ಬೈಕ್ ಒಂದಕ್ಕೊಂದು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ 2 ಟ್ರಕ್‌ಗಳ ನಡುವೆ 2 ಕಾರು ಹಾಗೂ ಬೈಕ್ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 7 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ವೇಳೆ ಕಿಲೋಮೀಟರ್‌ಗಟ್ಟಲೆ ವಾಹನ ಸಂಚಾರ ಸ್ಥಗಿತವಾಗಿತ್ತು. ಕೂಡಲೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಭಾನುವಾರ ರಾತ್ರಿ ವೀಕೆಂಡ್ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ವಾಹನಗಳ ದಟ್ಟಣೆಯೂ ಹೆಚ್ಚಾಗಿತ್ತು. ಲಾರಿ ಚಾಲಕನ ಅವಸರದಿಂದ ಅಪಘಾತ ಸಂಭವಿಸಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



