ಅಮೆರಿಕದಲ್ಲಿ ಅಪಘಾತ: ಯಾದಗಿರಿಯ ತಬಲಾ ಕಲಾವಿದ ಸಾಮ್ರಾಟ್ ಕಕ್ಕೇರಿ ಸಾವು
ಕ್ಯಾಲಿಫೋರ್ನಿಯಾದ ಮಿಡಲ್ ಟೌನ್ ಸಮೀಪ ಹಾರ್ಬಿನ್ ಸ್ಪ್ರೀಂಗ್ ರಸ್ತೆಯಲ್ಲಿ ಭಾನುವಾರ ಸಂಭವಿಸಿದ ಅಪಘಾತದಲ್ಲಿ ಸಾಮ್ರಾಟ್ ಕಕ್ಕೇರಿ ಅವರು ಸಾವನ್ನಪ್ಪಿದ್ದಾರೆ.

ಯಾದಗಿರಿ: ಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯಾದಗಿರಿ ಜಿಲ್ಲೆಯ ತಬಲಾ ಕಲಾವಿದ ಸಾಮ್ರಾಟ್ ಕಕ್ಕೇರಿ(45) ಅವರು ಮೃತಪಟ್ಟಿದ್ದಾರೆ.
ಕ್ಯಾಲಿಫೋರ್ನಿಯಾದ ಮಿಡಲ್ ಟೌನ್ ಸಮೀಪ ಹಾರ್ಬಿನ್ ಸ್ಪ್ರೀಂಗ್ ರಸ್ತೆಯಲ್ಲಿ ಭಾನುವಾರ ಸಂಭವಿಸಿದ ಅಪಘಾತದಲ್ಲಿ ಸಾಮ್ರಾಟ್ ಕಕ್ಕೇರಿ ಅವರು ಸಾವನ್ನಪ್ಪಿದ್ದು, ಅವರೊಂದಿಗಿದ್ದ ಮತ್ತೊಬ್ಬರು ಗಾಯಗೊಂಡಿದ್ದಾರೆ.
ಕಳೆದ 15 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿರುವ ಸಾಮ್ರಾಟ್ ಕಕ್ಕೇರಿ ಅವರು, ಕ್ಯಾಲಿಫೋರ್ನಿಯಾದಲ್ಲಿ ಆಯೋಜಿಸಿದ್ದ ಸಂಗೀಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ವಾಪಸ್ ಬರುತ್ತಿದ್ದಾಗ ಅವರ ಕಾರು ಮತ್ತು ಟ್ರಕ್ ಮಧ್ಯೆ ಡಿಕ್ಕಿ ಸಂಭವಿಸಿದೆ.
ಎಂಬಿಎ ಪದವೀಧರರಾಗಿದ್ದ ಸಾಮ್ರಾಟ್ ಕಕ್ಕೇರಿ ಅವರು ಮೊದಲು ಹೈದರಾಬಾದ್ ನಲ್ಲಿ ನೆಲೆಸಿದ್ದರು. ನಂತರ ಅಮೆರಿಕಕ್ಕೆ ತೆರಳಿ, ಅಲ್ಲಿಯ ಮಹಿಳೆಯನ್ನೇ ಮದುವೆಯಾಗಿದ್ದರು. ದಂಪತಿಗೆ ಒಂದು ಹೆಣ್ಣು ಮಗುವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



