ರಾಜ್ಯ

'Greater Bengaluru' ಕಾಯ್ದೆ ಪ್ರಶ್ನಿಸಿ PIL: ರಾಜ್ಯ ಸರ್ಕಾರ, BBMPಗೆ ಹೈಕೋರ್ಟ್ ನೋಟಿಸ್‌

ನಾಗಾಭರಣ ಅವರು ಹೈಕೋರ್ಟ್‌ಗೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆಯಡಿ ಬಿಬಿಎಂಪಿ ಯನ್ನು ಜಿಬಿಎಯಾಗಿ ಪರಿವರ್ತಿಸಲಾಗಿದೆ.

'Greater Bengaluru' ಕಾಯ್ದೆ ಪ್ರಶ್ನಿಸಿ PIL: ರಾಜ್ಯ ಸರ್ಕಾರ, BBMPಗೆ ಹೈಕೋರ್ಟ್ ನೋಟಿಸ್‌
ಹೈಕೋರ್ಟ್
Published On :

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ (ಜಿಬಿಎ) ಬದಲಾಯಿಸಿ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಚಲನಚಿತ್ರ ನಿರ್ದೇಶಕ ಟಿ. ಎಸ್.ನಾಗಾಭರಣ ಹೈಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಂಬಂಧ ನ್ಯಾಯಾಲಯ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಸೋಮವಾರ ನೋಟಿಸ್ ಜಾರಿ ಮಾಡಿದೆ.

ನಾಗಾಭರಣ ಅವರು ಹೈಕೋರ್ಟ್‌ಗೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆಯಡಿ ಬಿಬಿಎಂಪಿ ಯನ್ನು ಜಿಬಿಎಯಾಗಿ ಪರಿವರ್ತಿಸಲಾಗಿದೆ. ಈ ಕಾಯ್ದೆ ಸಂವಿಧಾನ 24ನೇ ತಿದ್ದುಪಡಿಗೆ (ಸ್ಥಳೀಯ ಸಂಸ್ಥೆಗಳಿಗೆ ಸಮಾನ ಸ್ಥಾನಮಾನ ಕಲ್ಪಿಸಿ ಅಧಿಕಾರ ವಿಕೇಂದ್ರಿಕರಣಕ್ಕೆ ಅವಕಾಶ ನೀಡಿರುವುದು) ತದ್ವಿರುದ್ಧವಾಗಿದೆ.

ಆದ್ದರಿಂದ ಕಾಯ್ದೆಯನ್ನು ಅಸಾಂವಿಧಾನಿಕ ಎಂಬುದಾಗಿ ಘೋಷಣೆ ಮಾಡಬೇಕು. ಜಿಬಿಎಯಾಗಿ ಪರಿವರ್ತಿಸಿ ಸರ್ಕಾರ ಹೊರಡಿಸಿದ ಅಧಿಸೂಚನೆ ರದ್ದುಪಡಿಸಬೇಕು. ಮುಂದಿನ 3 ತಿಂಗಳಲ್ಲಿ ಬಿಬಿಎಂ ಪಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ.

ಸೋಮವಾರ ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ವಿಭು ಬಬ್ರು ಅವರ ನೇತೃತ್ವದ ವಿಭಾಗೀಯ ಪೀಠ, ಪ್ರತಿವಾದಿಯಾಗಿರುವ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.