ರಾಜ್ಯ

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ

ಎಸ್ಐಟಿ ರಚನೆ ಬಳಿಕ ಸಾಕಷ್ಟು ಮಂದಿ ನನಗೆ ಕಲೆ ಮಾಡಿ, ತಮಗಾದ ಭಯಾನಕ ಅನುಭವ ಹಾಗೂ ದುರಂತಗಳ ಬಗ್ಗೆ ತಿಳಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿನ ಅನಾನುಕೂಲತೆಗಳಿಂದಾಗ ದೂರು ನೀಡಲು ಹಿಂಜರಿಯುತ್ತಿದ್ದಾರೆ.

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ
ಪೊಲೀಸ್ (ಸಾಂಕೇತಿಕ ಚಿತ್ರ) — online desk
Published On :

ಮಂಗಳೂರು: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ)ದ ಅಧಿಕಾರಿಗಳು ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ.

ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ಸ್ಥಾಪಿಸಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಹಾಗೂ ಭವಿಷ್ಯದಲ್ಲಿ ಬೆಳಕಿಗೆ ಬರುವ ಪ್ರಕರಣಗಳನ್ನೂ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ಐಟಿ ರಚನೆ ಬಳಿಕ ಸಾಕಷ್ಟು ಮಂದಿ ನನಗೆ ಕಲೆ ಮಾಡಿ, ತಮಗಾದ ಭಯಾನಕ ಅನುಭವ ಹಾಗೂ ದುರಂತಗಳ ಬಗ್ಗೆ ತಿಳಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿನ ಅನಾನುಕೂಲತೆಗಳಿಂದಾಗ ದೂರು ನೀಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಎಸ್ಐಟಿ ರಚಿಸಿರುವ ಸರ್ಕಾರ, ಸಹಾಯವಾಣಿಯನ್ನು ಆರಂಭಿಸಬೇಕೆಂದು ಮನವಿ ಮಾಡುತ್ತಿದ್ದೇನೆಂದು ಹೇಳಿದ್ದಾರೆ.

ಇದಲ್ಲದೆ, ಮುಂದೆ ಬರುವ ದೂರುಗಳನ್ನು ಸ್ವೀಕರಿಸಲು ಎಸ್ಐಟಿ ಕಚೇರಿಯೇ ಪೊಲೀಸ್ ಠಾಣೆಯೆಂದು ತಿಳಿಸಬೇಕು. ಇಲ್ಲದಿದ್ದರೆ, "ಎಸ್‌ಐಟಿ 'ಪೊಲೀಸ್ ಠಾಣೆ'ಯಾಗಿ ಕಾರ್ಯನಿರ್ವಹಿಸಿದರೂ 'ಪೊಲೀಸ್ ಠಾಣೆ' ಎಂದು ಅಧಿಸೂಚನೆಗೊಳ್ಳದ ಹಿನ್ನೆಲೆಯಲ್ಲಿ ಆರೋಪಿಗಳು ಅದನ್ನು ದುರುಪಯೋಗಪಡಿಸಿಕೊಂಡು ನ್ಯಾಯಾಲಯಗಳಿಂದ ತಡೆಯಾಜ್ಞೆ ಪಡೆಯುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.