ತುಮಕೂರು: ಕೊರಟಗೆರೆ ಬಳಿ ಬೇಕರಿಗೆ ನುಗ್ಗಿದ ಲಾರಿ, ಮೂವರು ಸಾವು; Video
ಇಂದು ಬೆಳಗ್ಗೆ ಗೊಬ್ಬರ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇಕರಿಗೆ ನುಗ್ಗಿದೆ.

ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ಗೊಬ್ಬರ ತುಂಬಿದ್ದ ಲಾರಿಯೊಂದು ರಸ್ತೆ ಬದಿಯ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ಗೊಬ್ಬರ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇಕರಿಗೆ ನುಗ್ಗಿದೆ. ಭೀಕರ ಅಪಘಾತದಲ್ಲಿ ಕಾಟೇನಹಳ್ಳಿ ನಿವಾಸಿ ರಂಗಶಾಮಯ್ಯ(65)ಹಾಗೂ ಪುರದಳ್ಳಿಯ ಬೈಲಪ್ಪ(65) ಸೇರಿ ಮೂವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಕಾಂತರಾಜು, ಸಿದ್ಧಗಂಗಮ್ಮ, ಜಯಣ್ಣ ಹಾಗೂ ಮೋಹನ್ ಕುಮಾರ್ ಅವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ತೀವ್ರ ಸಂತಾಪ ಸೂಚಿಸಿದ್ದು, ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಗೊಬ್ಬರ ತುಂಬಿದ್ದ ಲಾರಿ ಅಂಗಡಿಗೆ ನುಗ್ಗಿದ ಪರಿಣಾಮ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಸುದ್ದಿ ತಿಳಿದು ಆಘಾತವಾಯಿತು ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ. ದುಃಖತಪ್ತ ಕುಟುಂಬವರ್ಗದವರಿಗೆ ನನ್ನ ತೀವ್ರ ಸಂತಾಪಗಳು ಎಂದು ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


