ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: ಭ್ರಷ್ಟ ಅಧಿಕಾರಿಗಳ ಕಚೇರಿ, ನಿವಾಸಗಳಲ್ಲಿ ತೀವ್ರ ಶೋಧ; Video
ಬೆಂಗಳೂರಿನಲ್ಲಿ ಐಎಎಸ್ ಅಧಿಕಾರಿ ಸೇರಿ ಮೂವರು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ.

ಬೆಂಗಳೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ.
ಮೂವರು ಅಧಿಕಾರಿ ಮನೆ ಮೇಲೆ ದಾಳಿ
ಬೆಂಗಳೂರಿನಲ್ಲಿ ಐಎಎಸ್ ಅಧಿಕಾರಿ ಸೇರಿ ಮೂವರು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಆರ್.ಟಿ.ನಗರದಲ್ಲಿರುವ ಹಿರಿಯ ಐಎಎಸ್ ಅಧಿಕಾರಿ ವಾಸಂತಿ ಅಮರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಆರೋಪ ಕೇಳಿಬಂದಿದೆ. ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮೈಸೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದೆ. ಇನ್ನು ಮೈಸೂರಿನ ಸಾತಗಳ್ಳಿಯ ಜೆಪಿನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಮನೆ ಮೇಲೂ ದಾಳಿ ಮಾಡಲಾಗಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪ ಕೇಳಿಬಂದಿದೆ.
ಬಳ್ಳಾರಿಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ. ಬೆಂಗಳೂರು ಟೌನ್ ಮತ್ತು ರೂರಲ್ ಪ್ಲ್ಯಾನಿಂಗ್ ಆಫೀಸರ್ ಮಾರುತಿ ಬಗಲಿಗೆ ಸೇರಿದ 3 ಸ್ಥಳಗಳ ಮೇಲೆ ದಾಳಿ ಮಾಡಿರುವ ಬೆಂಗಳೂರು ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ. ಬೆಂಗಳೂರು ನಿವಾಸಿಯಾಗಿರುವ ಅಧಿಕಾರಿ ಮಾರುತಿ ಬಗಲಿ ವಿರುದ್ಧ ರಾಜ್ಯದ ಹಲವೆಡೆ ಆಸ್ತಿ ಮಾಡಿರುವ ಆರೋಪ ಕೇಳಿಬಂದಿದೆ.
ಇನ್ನು ಕೊಪ್ಪಳ ನಗರದಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಸುನೀಲ ಮೇಗಳಮನಿ ನೇತೃತ್ವದಲ್ಲಿ ಅಭಿಷೇಕ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಶೇಕು ಚವ್ಹಾಣ್ಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲೂ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


