ಬೆಂಗಳೂರು: ಗರ್ಭಿಣಿ ಪತ್ನಿಯ ಕೊಂದು, ಶವದೊಂದಿಗೆ 2 ದಿನ ಕಳೆದ ಹಂತಕ ಬಂಧನ
ಆರೋಪಿ ಶಿವಂ ಉತ್ತರ ಪ್ರದೇಶದ ಕುಶಿನಗರದ ಮೂಲದವನರಾಗಿದ್ದು, ಆರು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ. ಮದ್ಯವ್ಯಸನಿಯಾಗಿದ್ದ ಶಿವಂ ಆಗಾಗ್ಗೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ.

ಬೆಂಗಳೂರು: ಗರ್ಭಿಣಿ ಪತ್ನಿಯ ಕೊಂದ ಆರೋಪದ ಮೇಲೆ ಉತ್ತರಪ್ರದೇಶ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.
ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಸುಮನ್ ಎಂದು ಗುರ್ತಿಸಲಾಗಿದೆ. ಪತ್ನಿ ಕೊಂದ ಆರೋಪದ ಮೇಲೆ ಶಿವಂ ಸಹಾನೆ ಎಂಬಾತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿ ಶಿವಂ ಉತ್ತರ ಪ್ರದೇಶದ ಕುಶಿನಗರದ ಮೂಲದವನರಾಗಿದ್ದು, ಆರು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ. ಮದ್ಯವ್ಯಸನಿಯಾಗಿದ್ದ ಶಿವಂ ಆಗಾಗ್ಗೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎಂದು ತಿಳಿದುಂದಿದೆ.
ಸೋಮವಾರ ನಡೆದ ಜಗಳದ ಸಮಯದಲ್ಲಿ, ಶಿವಂ, ಸುಮನ್‌ಗೆ ಕಪಾಳಕ್ಕೆ ಹೊಡೆದಿದ್ದು, ನಂತರ ಪತ್ನಿಯಿಂದ ಶಿವಂ ಪ್ರತ್ಯೇಕವಾಗಿ ಮಲಗಿದ್ದಾನೆ. ರಾತ್ರಿ ಮಹಿಳೆ ಸಾವನ್ನಪ್ಪಿದ್ದು, ಇದನ್ನು ಅರಿಯದ ಶಿವಂ ಮಂಗಳವಾರ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದಾನೆ. ಮನೆಗೆ ಹಿಂದಿರುಗಿದಾಗ ಆಕೆ ಸಾವನ್ನಪ್ಪಿರುವುದು ತಿಳಿದುಬಂದಿದೆ. ಆದರೆ, ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡುವ ಬದಲು ಶವದೊಂದಿಗೆ 2 ದಿನ ಕಾಲ ಕಳೆದಿದ್ದಾನೆ.
ಬಳಿಕ ಮೃತದೇಹವನ್ನು ವಿಲೇವಾರಿ ಮಾಡಲು ಯೋಚಿಸಿದ್ದಾನೆ. ಆದರೆ, ಸಿಕ್ಕಿಬೀಳುವ ಭಯದಿಂದ ಆಲೋಚನೆನಯ್ನು ಕೈಬಿಟ್ಟಿದ್ದಾನೆ. ಬುಧವಾರ ಬೆಳಿಗ್ಗೆ ಮನೆಯಿಂದ ದುರ್ವಾಸನೆ ಬರುವುದನ್ನು ಕಂಡ ಮನೆ ಮಾಲೀಕ ಮಹೇಶ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಹಿಳೆ ಮೂರು ದಿನಗಳ ಹಿಂದೆ ಸಾವನ್ನಪ್ಪಿದ್ದು, ದೇಹದ ಮೇಲೆ ಯಾವುದೇ ಬಾಹ್ಯ ಗಾಯಗಳಿಲ್ಲ. ಆದರೆ, ಮೂಗಿನಿಂದ ರಕ್ತಸ್ರಾವವಾಗಿದ್ದು, ಬಲವಾದ ಹೊಡೆತದಿಂದಾಗಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರಕರಣ ಸಂಬಂಧ ಶಿವಂ ವಿರುದ್ಧ ಬಿಎನ್ಎಸ್ 103(1) ಅಡಿಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



