ರಾಜ್ಯ

ಬೆಂಗಳೂರು: ಅಣ್ಣನ 3 ಮಕ್ಕಳ ಮರ್ಮಾಂಗಕ್ಕೆ ರಾಡ್‌ನಿಂದ ಹೊಡೆದು ಹಲ್ಲೆ; ಇಬ್ಬರು ಸಾವು, 5ರ ಬಾಲಕ ಜೀವನ್ಮರಣ ಹೋರಾಟ!

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿದ್ದು 9 ವರ್ಷದ ಮಹಮ್ಮದ್ ಇಶಾಕ್, 7 ವರ್ಷದ ಮಹಮ್ಮದ್ ಜುನೇದ್ ಸ್ಥಳದಲ್ಲೇ ಮೃತಪಟ್ಟಿದ್ದರೆ 5 ವರ್ಷದ ರೋಹನ್ ಜೀವನ್ಮರಣ ಹೋರಾಟ ನಡೆಸಿದ್ದಾನೆ.

ಬೆಂಗಳೂರು: ಅಣ್ಣನ 3 ಮಕ್ಕಳ ಮರ್ಮಾಂಗಕ್ಕೆ ರಾಡ್‌ನಿಂದ ಹೊಡೆದು ಹಲ್ಲೆ; ಇಬ್ಬರು ಸಾವು, 5ರ ಬಾಲಕ ಜೀವನ್ಮರಣ ಹೋರಾಟ!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ ಮಹಮ್ಮದ್ ಇಶಾಕ್, 7 ವರ್ಷದ ಮಹಮ್ಮದ್ ಜುನೇದ್ ಸ್ಥಳದಲ್ಲೇ ಮೃತಪಟ್ಟಿದ್ದರೆ 5 ವರ್ಷದ ರೋಹನ್ ಜೀವನ್ಮರಣ ಹೋರಾಟ ನಡೆಸಿದ್ದಾನೆ.

35 ವರ್ಷದ ಖಾಸೀಂ ಮೂರು ಮಕ್ಕಳ ಗುಪ್ತಾಂಗಗಳಿಗೆ ಕಬ್ಬಿಣದ ರಾಡ್‌ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಚಾಂದ್‌ ಪಾಷ 5 ವರ್ಷಗಳ ಹಿಂದೆ ತಾಯಿ, ಪತ್ನಿ, ಮೂವರು ಮಕ್ಕಳು ಮತ್ತು ಆರೋಪಿ ಖಾಸೀಂ ಜೊತೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಇಂದು ಮನೆಯಲ್ಲಿ ಮಕ್ಕಳನ್ನ ಅಜ್ಜಿಯೊಂದಿಗೆ ಬಿಟ್ಟು ಚಾಂದ್ ಪಾಷ ಮತ್ತು ಆತನ ಪತ್ನಿ ಕೆಲಸಕ್ಕೆ ಹೋಗಿದ್ದರು. ಅಜ್ಜಿ ತರಕಾರಿ ತರಲು ಮಾರ್ಕೆಟ್‌ಗೆ ಹೋಗಿದ್ದಾಗ ಮಾನಸಿಕ ಅಸ್ವಸ್ಥನಂತೆ ವರ್ತಿಸಿರುವ ಖಾಸೀಂ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.