ಮೈಸೂರಿನಲ್ಲಿ ಡ್ರಗ್ಸ್ ತಯಾರಿಸುವ ಫ್ಯಾಕ್ಟರಿ ಪತ್ತೆ; ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ಜಪ್ತಿ
ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ ರಿಂಗ್‌ರಸ್ತೆಯಲ್ಲಿರುವ ಎಂಡಿಎಂಎ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ, ಆರು ಮಂದಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ ಪತ್ತೆಯಾಗಿದ್ದು, ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ ರಿಂಗ್‌ರಸ್ತೆಯಲ್ಲಿರುವ ಎಂಡಿಎಂಎ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ, ಆರು ಮಂದಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸರು, ಹೊರವಲಯದ ರಿಂಗ್ ರಸ್ತೆ ಬಳಿ ಇರುವ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಕೋಟ್ಯಂತರ ರೂ. ಮೌಲ್ಯದ ಎಂಡಿಎಂಎ ಹಾಗೂ ಅದರ ತಯಾರಿಕೆಗೆ ಬಳಕೆ ಮಾಡಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಮೈಸೂರಿನಲ್ಲಿ ಪತ್ತೆಯಾದ ಮಾದಕ ವಸ್ತುವಿಗೆ ಮಹಾರಾಷ್ಟ್ರದ ನಂಟು ಇದ್ದು, ಮಹಾರಾಷ್ಟ್ರದಲ್ಲಿ ಸೆರೆಯಾದ ಡ್ರಗ್ ಪೆಡ್ಲರ್‌ನಿಂದ ಈ ಮಾಹಿತಿ ಬಹಿರಂಗವಾಗಿದೆ .ಮೈಸೂರಿನಿಂದ ಡ್ರಗ್ ಸಪ್ಲೈ ಆಗುತ್ತಿರುವ ಬಗ್ಗೆ ಪೆಡ್ಲರ್ ಬಾಯ್ಬಿಟ್ಟಿದ್ದಾನೆ. ಹೀಗಾಗಿ ಮಹಾರಾಷ್ಟ್ರ ಪೊಲೀಸರು ಇಂದು ಮೈಸೂರು ಪೊಲೀಸರ ಸಹಯೋಗದಲ್ಲಿ ದಾಳಿ ನಡೆಸಿದ್ದಾರೆ.
ಮೈಸೂರಿನಿಂದ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ಎಂಡಿಎಂಎ ಸರಬರಾಜು ಮಾಡುತ್ತಿರುವುದು ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿದೆ.
ಮಹಾರಾಷ್ಟ್ರದಲ್ಲಿ ಬಂಧಿತ ಡ್ರಗ್ ಪೆಡ್ಲರ್ ಒಬ್ಬ ತಮಗೆ ಮೈಸೂರಿನಿಂದ ಎಂಡಿಎಂಎ ಸರಬರಾಜು ಆಗುತ್ತಿರುವುದಾಗಿ ಮಾಹಿತಿ ನೀಡಿದ್ದಾನೆ. ಅದನ್ನು ಆಧರಿಸಿ ಮೈಸೂರಿಗೆ ಆಗಮಿಸಿದ ಮಹಾರಾಷ್ಟ್ರ ಪೊಲೀಸರು ಸ್ಥಳೀಯ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಸಿದಾಗ ಡ್ರಗ್ಸ್ ತಯಾರಿಕಾ ಅಡ್ಡೆ ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



