ರಾಜ್ಯ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಆರೋಗ್ಯ ಸ್ಥಿತಿ ಗಂಭೀರ- ಆಸ್ಪತ್ರೆಗೆ ದಾಖಲು!

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ.

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಆರೋಗ್ಯ ಸ್ಥಿತಿ ಗಂಭೀರ- ಆಸ್ಪತ್ರೆಗೆ ದಾಖಲು!
ಮಲ್ಲಿಕಾರ್ಜುನ ಖರ್ಗೆ
Published On :

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಮಿಲಿಂದ್ ಖರ್ಗೆ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಿಲಿಂದ್‌ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ (ಜು.27) ಸಂಜೆ ಬಳಿಕ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಮಿಲಿಂದ್ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಹಿರಿಯ ಸಹೋದರ ಪ್ರಿಯಾಂಕ್ ಖರ್ಗೆ ಹೊರತುಪಡಿಸಿದರೆ ಕಿರಿಯ ಸಹೋದರರು ರಾಜಕೀಯದಲ್ಲಾಗಲಿ, ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡವರಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.