ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾಭದ್ರಾ ನದಿ: ತಗ್ಗು ಪ್ರದೇಶಗಳ ನಿವಾಸಿಗಳಿಗೆ ಎಚ್ಚರಿಕೆ
ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು,ಅಪಾಯದ ಮಟ್ಟದಲ್ಲಿ ನದಿ ಹರಿಯುತ್ತಿರುವ ಕಾರಣ ನದಿಪಾತ್ರದಲ್ಲಿನ ಜನರು ಎಚ್ಚರಿಕೆಯಿಂದಿರಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.

ದಾವಣಗೆರೆ: ಭಾರೀ ಮಳೆಯ ಪರಿಣಾಮ ಅಪಾಯದ ಮಟ್ಟ ಮೀರಿ ತುಂಗಾಭದ್ರಾ ನದಿ ಹರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು,ಅಪಾಯದ ಮಟ್ಟದಲ್ಲಿ ನದಿ ಹರಿಯುತ್ತಿರುವ ಕಾರಣ ನದಿಪಾತ್ರದಲ್ಲಿನ ಜನರು ಎಚ್ಚರಿಕೆಯಿಂದಿರಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.
ಶಿವಮೊಗ್ಗ ಮತ್ತು ಚಿಕ್ಕಮಗಳೂರು, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ, ಡ್ಯಾಂಗಳಿಂದ ನದಿಗೆ ನೀರು ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ಸ್ ನೀರು ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಜನರು ನದಿಪಾತ್ರದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಜಾನುವಾರುಗಳು ಸೇರಿದಂತೆ ನದಿಗೆ ಇಳಿಯಬಾರದು ಎಂದು ಸೂಚನೆ ನೀಡಿದ್ದಾರೆ.
ತುಂಗಾ ಜಲಾಶಯದಿಂದ 68,599 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದ್ದು, ಭದ್ರಾ ಜಲಾಶಯ ಭರ್ತಿಯಾಗುವ ಹಂತದಲ್ಲಿದೆ. ಪರಿಣಾಮ 39017 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿರುತ್ತದೆ. ಪ್ರಸ್ತುತ ತುಂಗಭದ್ರಾ ನದಿಯಲ್ಲಿ ಅಪಾಯ ಮಟ್ಟ ಮೀರಿ 1,12,170 ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಇದರಿಂದಾಗಿ ಹೊನ್ನಾಳಿ, ನ್ಯಾಮತಿ ಹಾಗೂ ಹರಿಹರ ತಾಲ್ಲೂಕುಗಳ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುತ್ತದೆ.
ಮುಂಜಾಗ್ರತಾ ಕ್ರಮವಾಗಿ ಹೊನ್ನಾಳಿ ಪಟ್ಟಣದ ನದಿ ತೀರದ ಬಾಲರಾಜ್‍ಘಾಟ್ ಪ್ರದೇಶದ ಬಳಿ ಅಂಬೇಡ್ಕರ್ ಭವನದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, 8 ಕುಟುಂಬದ 33 ಜನರನ್ನು ಸ್ಥಳಾಂತರ ಮಾಡಿ ಸಂತ್ರಸ್ತರಿಗೆ ಊಟೋಪಚಾರ ಹಾಗೂ ಅಗತ್ಯ ಮೂಲ ಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಹರಿಹರ ಪಟ್ಟಣದ ಗಂಗಾನಗರ ಬಳಿ ಎಪಿಎಂಸಿ ಭವನದಲ್ಲಿ ಹಾಗೂ ನ್ಯಾಮತಿ ತಾಲ್ಲೂಕು ಚೀಲೂರು ಗ್ರಾಮದಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಜನ ಹಾಗೂ ಜಾನುವಾರುಗಳು ನದಿಗೆ ಇಳಿಯದಂತೆ ತಿಳಿಸಿದೆ ಹಾಗೂ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಯ ಬಳಿ ಸೆಲ್ಫಿ ತೆಗೆದುಕೊಳ್ಳವುದನ್ನು ನಿಷೇದಿಸಿದೆ ಎಂದು ತಿಳಿಸಿದ್ದಾರೆ.
ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಸಹಾಯಕ್ಕಾಗಿ ಈ ಕೆಳಕಂಡ ಸಹಾಯವಾಣಿಗಳನ್ನು ತೆರೆಯಲಾಗಿದೆ.
ಜಿಲ್ಲಾಧಿಕಾರಿಗಳ ಕಾರ್ಯಾಲಯ, ದಾವಣಗೆರೆ 08192-234034 ಅಥವಾ 1077 ಎಸ್‍ಡಿಆರ್‍ಎಫ್ ಘಟಕ ದೇವರಬೆಳೆಕೆರೆ 7411308591, ಆಗ್ನಿಶಾಮಕ ಇಲಾಖೆ ದಾವಣಗೆರೆ 08192-258101 ಅಥವಾ 112, ಮಹಾನಗರ ಪಾಲಿಕೆ ದಾವಣಗೆರೆ 08192-234444 ಹಾಗೂ 8277234444 (ವಾಟ್ಸ್ಆಪ್) ಸ್ಮಾರ್ಟ್ ಸಿಟಿ, ದಾವಣಗೆರೆ, 18004256020, ತಾಲ್ಲೂಕು ಕಛೇರಿ, ದಾವಣಗೆರೆ 9036396101, ತಾಲ್ಲೂಕು ಕಛೇರಿ, ಹರಿಹರ 08192-272959, ತಾಲ್ಲೂಕು ಕಛೇರಿ, ಜಗಳೂರು 08196-227242, ತಾಲ್ಲೂಕು ಕಛೇರಿ, ಹೊನ್ನಾಳಿ 08188-252108, ತಾಲ್ಲೂಕು ಕಛೇರಿ, ನ್ಯಾಮತಿ 8073951245, ತಾಲ್ಲೂಕು ಕಛೇರಿ, ಚನ್ನಗಿರಿ 08188-295518 ಇಲ್ಲಿ ಸಹಾಯವಾಣಿ ಕೇಂದ್ರಗಳಿಗೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



