ರಾಜ್ಯ

ಕರಾವಳಿ ಭಾಗದಲ್ಲಿ ಭಾರಿ ಮಳೆ; ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

ಪೊಲೀಸರ ಪ್ರಕಾರ, ಭಾರಿ ವಾಹನಗಳನ್ನು ಲಭ್ಯವಿರುವ ರಾಜ್ಯ ಹೆದ್ದಾರಿಗಳ ಮೂಲಕ ಮತ್ತು ಸಣ್ಣ ವಾಹನಗಳನ್ನು ಪ್ರಮುಖ ಜಿಲ್ಲಾ ರಸ್ತೆಗಳ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

ಕರಾವಳಿ ಭಾಗದಲ್ಲಿ ಭಾರಿ ಮಳೆ; ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ
ಪ್ರಾತಿನಿಧಿಕ ಚಿತ್ರ
Published On :

ಮಂಗಳೂರು: ಕಡಬ ತಾಲ್ಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಭಾನುವಾರ ತಡರಾತ್ರಿ ಭಾರಿ ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಂತರ, ಪೊಲೀಸರು ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಹಲವಾರು ರಸ್ತೆಗಳ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಮಣ್ಣು ಕುಸಿತಗೊಂಡಿದ್ದ ರಸ್ತೆಯನ್ನು ಮುಚ್ಚಲಾಗಿದೆ. ಹೆದ್ದಾರಿಯಲ್ಲಿನ ಮಣ್ಣನ್ನು ತೆರವುಗೊಳಿಸಲು ಕೆಲಸ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಭಾರಿ ವಾಹನಗಳನ್ನು ಲಭ್ಯವಿರುವ ರಾಜ್ಯ ಹೆದ್ದಾರಿಗಳ ಮೂಲಕ ಮತ್ತು ಸಣ್ಣ ವಾಹನಗಳನ್ನು ಪ್ರಮುಖ ಜಿಲ್ಲಾ ರಸ್ತೆಗಳ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

ಇದೀಗ ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣಿಕರು ಒಳ ರಸ್ತೆಗಳಲ್ಲಿ ಪ್ರಯಾಣಿಸಲು ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡಿದೆ.

ಮಣ್ಣು ಕುಸಿತಗೊಂಡಿರುವ ಪ್ರದೇಶದಲ್ಲಿ ಭಾರಿ ವಾಹನಗಳನ್ನು ತಡೆಹಿಡಿಯಲಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿನ ಮಣ್ಣು ತೆರವುಗೊಂಡ ನಂತರವೇ ಅವುಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.