ಬಳ್ಳಾರಿ: ಕಾರು-ಲಾರಿ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೆ ಸಾವು
ಮೃತರನ್ನು ಶೇಖರಗೌಡ ಹಾಗೂ ಜಿ. ಬಸವರಾಜ್ ಎಂದು ಗುರುತಿಸಲಾಗಿದ್ದು, ಕಾರಿನ ಹಿಂಭಾಗದ ಸೀಟಿನಲ್ಲಿ ಕುಳಿತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಸೋಮವಾರ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಶೇಖರಗೌಡ ಹಾಗೂ ಜಿ. ಬಸವರಾಜ್ ಎಂದು ಗುರುತಿಸಲಾಗಿದ್ದು, ಕಾರಿನ ಹಿಂಭಾಗದ ಸೀಟಿನಲ್ಲಿ ಕುಳಿತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ .
ಬಳ್ಳಾರಿಯಿಂದ ಸಿಂಧನೂರು ಕಡೆ ಹೊರಟಿದ್ದ ಮಾರುತಿ ಫ್ರಾಂಕ್ಸ್ ಕಾರು ಹಾಗೂ ಬಳ್ಳಾರಿ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಈ ಪೈಕಿ ಇಬ್ಬರು ಸ್ಥಳಕ್ಕೆ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬಳ್ಳಾರಿ ಎಸ್ಪಿ ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



