ರಾಜ್ಯ

ನಟ ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕೇಸ್ CCB ಗೆ ವರ್ಗಾವಣೆ!

ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.

ನಟ ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕೇಸ್ CCB ಗೆ ವರ್ಗಾವಣೆ!
ದರ್ಶನ್-ರಮ್ಯಾ
Published On :

ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ಇಂದು ರಮ್ಯಾ ಬೆಂಗಳೂರು ಪೊಲೀಸ್ ಕಮಿಷನರ್ ಗೆ ತನಗೆ ಅಶ್ಲೀಲ ಸಂದೇಶ ಬಂದಿದ್ದ 43 ಖಾತೆಗಳನ್ನು ಉಲ್ಲೇಖಿಸಿ 4 ಪುಟಗಳ ದೂರು ನೀಡಿದ್ದರು. ಹೀಗಾಗಿ ಕೇಂದ್ರ ಅಪರಾಧ ವಿಭಾಗದ ಜಂಟಿ ಆಯುಕ್ತರ ಮೇಲ್ವಿಚಾರಣೆಯಲ್ಲಿ ಓರ್ವ ಎಸಿಪಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ. ಪ್ರಕರಣ ಗಂಭೀರವಾಗಿ ಪರಿಗಣಿಸಿ ಸಿಸಿಬಿ ಸೈಬರ್ ಠಾಣೆಗೆ ವಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

ತಮ್ಮ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿರುವ ನಟಿ ರಮ್ಯಾ ಅವರು, ಮಹಿಳಾ ಆಯೋಗ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ರಮ್ಯಾ ನೀಡಿದ ದೂರಿನ ಆಧಾರದ ಮೇಲೆ ಪ್ರಮೋದ ಗೌಡ ಎಂಬ ವ್ಯಕ್ತಿ ಸೇರಿ 43 ಅಕೌಂಟ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.