ರಾಜ್ಯ

ಆಗಸ್ಟ್ 1ರಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ: 'Bridge-to-Bengaluru' ಕಾರ್ಯಕ್ರಮದಲ್ಲಿ ಭಾಗಿ

ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯು ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ಆಗಸ್ಟ್‌ 1ರಂದು ಸಂಜೆ 6 ಗಂಟೆಗೆ ಆಯೋಜಿಸಿರುವ ‘ಬ್ರಿಡ್ಜ್‌ ಟು ಬೆಂಗಳೂರು’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಆಗಸ್ಟ್ 1ರಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ: 'Bridge-to-Bengaluru' ಕಾರ್ಯಕ್ರಮದಲ್ಲಿ ಭಾಗಿ
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್‌ 1 ರಂದು ದೆಹಲಿಗೆ ಭೇಟಿ ನೀಡಲಿದ್ದಾರೆಂದು ಬುಧವಾರ ತಿಳಿದುಬಂದಿದೆ.

ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯು ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ಆಗಸ್ಟ್‌ 1ರಂದು ಸಂಜೆ 6 ಗಂಟೆಗೆ ಆಯೋಜಿಸಿರುವ ‘ಬ್ರಿಡ್ಜ್‌ ಟು ಬೆಂಗಳೂರು’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ದೇಶಗಳ ರಾಯಭಾರಿಗಳೂ ಪಾಲ್ಗೊಳ್ಳಲಿದ್ದಾರೆ.

ಮರುದಿನ ಅಂದರೆ ಆ.2ರಂದು ಬೆಳಗ್ಗೆ 9.30ಕ್ಕೆ ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗವು ವಿಜ್ಞಾನ ಭವನದಲ್ಲಿ ಆಯೋಜಿಸಿರುವ ‘ಸಾಮಾಜಿಕ ನ್ಯಾಯ: ಡಾ. ಬಿ.ಆರ್.‌ ಅಂಬೇಡ್ಕರ್‌ ದೃಷ್ಟಿಕೋನ’ ವಿಷಯದ ಕುರಿತ ವಿಚಾರ ಸಂಕಿರಣದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತಿತರರು ಕೂಡಾ ವಿಚಾರ ಸಂಕಿರಣದಲ್ಲಿ ಉಪಸ್ಥಿತರಿರಲಿದ್ದು, ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಸಾಮಾಜಿಕ ನ್ಯಾಯದ ಕುರಿತು ಮುಖ್ಯಮಂತ್ರಿ ಭಾಷಣ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.