ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ: ಅಮಾನತು ಹಿಂಪಡೆದು ಬಿ. ದಯಾನಂದ್ ಸೇರಿ IPS ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿದ ರಾಜ್ಯ ಸರ್ಕಾರ!

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದರು.

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ: ಅಮಾನತು ಹಿಂಪಡೆದು ಬಿ. ದಯಾನಂದ್ ಸೇರಿ IPS ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿದ ರಾಜ್ಯ ಸರ್ಕಾರ!
ಬಿ. ದಯಾನಂದ್
Published On :

ಬೆಂಗಳೂರು: RCB ತಂಡದ ಚೊಚ್ಚಲ ಐಪಿಎಲ್ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಅಮಾನುತು ಮಾಡಲಾಗಿದ್ದ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಇದೀಗ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಸೇರಿದಂತೆ ನಾಲ್ವರನ್ನು ಅಮಾನತು ಮಾಡಲಾಗಿತ್ತು. ಈ ಅಮಾನತನ್ನು ಹಿಂಪಡೆದಿರುವ ರಾಜ್ಯ ಸರ್ಕಾರ ಇದೀಗ ಬಿ.ದಯಾನಂದ್ ಅವರನ್ನ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಎಡಿಜಿಪಿಯಾಗಿ ಸ್ಥಳ ನಿಯೋಜನೆ ಮಾಡಿದೆ. ಐಪಿಎಸ್ ಅಧಿಕಾರಿ ಶೇಖರ್‌ ಅವರನ್ನು ಗುಪ್ತಚರ ಇಲಾಖೆಯ ಎಸ್‌ಪಿ ಹುದ್ದೆ ನೀಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.