ರಾಜ್ಯ

ಬೆಳಗಾವಿ ಬಾಲಕಿ ಮೇಲೆ ಅತ್ಯಾಚಾರ: ಇಬ್ಬರು ಅಪ್ರಾಪ್ತರು ಸೇರಿದಂತೆ ಬಂಧಿತರ ಸಂಖ್ಯೆ 5ಕ್ಕೆ ಏರಿಕೆ!

ಪರಾರಿಯಾದ ಮತ್ತೊಬ್ಬ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದೇವೆ ಎಂದು ನಗರ ಪೊಲೀಸ್‌ ಕಮಿಷನರ್‌ ಭೂಷಣ್‌ ಗುಲಾಬರಾವ್‌ ಬೊರಸೆ ಹೇಳಿದರು.

ಬೆಳಗಾವಿ ಬಾಲಕಿ ಮೇಲೆ ಅತ್ಯಾಚಾರ: ಇಬ್ಬರು ಅಪ್ರಾಪ್ತರು ಸೇರಿದಂತೆ ಬಂಧಿತರ ಸಂಖ್ಯೆ 5ಕ್ಕೆ ಏರಿಕೆ!
ಸಂಗ್ರಹ ಚಿತ್ರ
Published On :

ಬೆಳಗಾವಿ: ಬೆಳಗಾವಿಯಲ್ಲಿ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 5ಕ್ಕೇರಿಕೆಯಾಗಿದ್ದು, ಈ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ ಎಂದು ತಿಳಿದುಬಂದಿದೆ.

15 ವರ್ಷದ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇದಲ್ಲದೆ ಇಬ್ಬರು ಅಪ್ರಾಪ್ತರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಾರಿಯಾದ ಮತ್ತೊಬ್ಬ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದೇವೆ ಎಂದು ನಗರ ಪೊಲೀಸ್‌ ಕಮಿಷನರ್‌ ಭೂಷಣ್‌ ಗುಲಾಬರಾವ್‌ ಬೊರಸೆ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಎಪಿಎಂಸಿ ಠಾಣೆಯಲ್ಲಿ 6 ಮಂದಿ ವಿರುದ್ಧ ಶನಿವಾರ ಎಫ್‌ಐಆರ್‌ ದಾಖಲಾಗಿತ್ತು. ಇದಾದ 24 ಗಂಟೆಗಳೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿಗಳು ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ’ ಎಂದರು.

ಅಂತೆಯೇ 'ಆರಂಭದಲ್ಲಿ ಒಬ್ಬನು ಬಾಲಕಿ ಪರಿಚಯಿಸಿಕೊಂಡು, ಸ್ನೇಹ ಬೆಳೆಸುತ್ತಾನೆ. ಬಳಿಕ ಆತ ಮತ್ತು ಸ್ನೇಹಿತರು 2024ರ ಡಿಸೆಂಬರ್‌ನಲ್ಲಿ ಪುಸಲಾಯಿಸಿಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರದ ದೃಶ್ಯವನ್ನು ಆರೋಪಿಗಳು ವಿಡಿಯೊ ರೆಕಾರ್ಡ್ ಮಾಡಿದ್ದಾರೆ.

ಅದನ್ನೇ ತೋರಿಸಿ ಬ್ಲ್ಯಾಕ್‌ಮೇಲ್‌ ಮಾಡಿ, 2025ರ ಜನವರಿಯಲ್ಲಿ ಮತ್ತೆ ಮೂವರು ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಲಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಯತ್ನಿಸಲಾಗುವುದು' ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.