ರಾಜ್ಯ

ನಿಯಮ ಉಲ್ಲಂಘನೆ ಆರೋಪ: ವಿರಾಟ್​ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ FIR ದಾಖಲು

ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು.

ನಿಯಮ ಉಲ್ಲಂಘನೆ ಆರೋಪ: ವಿರಾಟ್​ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ FIR ದಾಖಲು
ವಿರಾಟ್ ಕೊಹ್ಲಿ
Published On :

ಬೆಂಗಳೂರು: ಪ್ರತ್ಯೇಕ ಸ್ಥಳವಿಲ್ಲದೆ ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ 2024ರ ಜುಲೈನಲ್ಲಿ ಇದೇ ಬಾರ್ ಮೇಲೆ ಅವಧಿ ಮೀರಿ ಪಬ್ ನಡೆಸುತ್ತಿದ್ದರು ಎಂದು ದೂರು ದಾಖಲಾಗಿತ್ತು. ಜು.6 ರಂದು ರಾತ್ರಿ 1:20ರವರೆಗೆ ಪಬ್ ತೆರೆದಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರುವುದಾಗಿ ಮಾಹಿತಿ ಇತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಇದೀಗ ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.