ಸುಹಾಸ್ ಶ್ರದ್ದಾಂಜಲಿಯಲ್ಲಿ ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR
ಬಂಟ್ವಾಳ ತಾಲ್ಲೂಕಿನ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಮೇ 12 ರಂದು ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಸುಮಾರು 500 ಜನ ಭಾಗವಹಿಸಿದ್ದರು.

ಮಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಆರ್ಎಸ್ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಜಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಡಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದ ಮೇಲೆ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಬಂಟ್ವಾಳ ತಾಲ್ಲೂಕಿನ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಮೇ 12 ರಂದು ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಸುಮಾರು 500 ಜನ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ಸಮಾಜದ ಸ್ವಾಸ್ತ್ಯ ಕದಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿದ್ದಾರೆ.
ಈ ಪ್ರಕರಣದ ಬಗ್ಗೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 2ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 353(2) ಬಿಎನ್ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ದ್ವೇಷ ಭಾಷಣ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಎಷ್ಟೇ ಪ್ರಭಾವಿಗಳಿದ್ದರೂ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ನಿರ್ದೇಶನ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೇ 31 ರಂದು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



