ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡಿಪಾರಿಗೆ ನೋಟಿಸ್
ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್ನಲ್ಲಿ ಆದೇಶಿಸಲಾಗಿದೆ.

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಈ ಕಠಿಣ ಕ್ರಮದ ಭಾಗವಾಗಿ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Puthila) ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್ನಲ್ಲಿ ಆದೇಶಿಸಲಾಗಿದೆ.
ಅರುಣ್ ಪುತ್ತಿಲ ಗಡಿಪಾರು ನೋಟಿಸ್ ವಿವರ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೃಷ್ಣಯ್ಯ ಎಂಬವರ ಮಗ ಆರುಣ್ ಕುಮಾರ್ ಪುತ್ತಿಲ ಎಂಬಾತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ದಿನಾಂಕ: 06-06-2025 ರಂದು ನಿಗದಿಪಡಿಸಲಾಗಿದೆ. ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
‘ಈ ಪ್ರಕರಣದಲ್ಲಿ ನೀವು (ಪುತ್ತಿಲ) ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಹ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಅರುಣ್ ಪುತ್ತಿಲಗೆ ಯಾವ ಕಾರಣಕ್ಕೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬುದನ್ನು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ನಲ್ಲಿ ಉಲ್ಲೇಖಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



