High tea ceremony: ಪ್ರಧಾನಿ ಮೋದಿ ಭೇಟಿಯಾದ ನಟ ಅನಂತ್ ನಾಗ್
ಕಾರ್ಯಕ್ರಮದಲ್ಲಿ ಅನಂತ್ ನಾಗ್ ಹಾಗೂ ಮೋದಿ ಪರಸ್ಪರ ಮಾತುಕತೆ ನಡೆಸಿದ್ದು, ಈ ಸಂದರ್ಭದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನವದೆಹಲಿ: ಪದ್ಮಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ನೀಡಿದ ಹೈ ಟೀ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರನ್ನು ಮಾತನಾಡಿಸಿದ್ದು, ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 27 ರಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಹಿರಿಯ ನಟ ಅನಂತ್ ನಾಗ್, ರಿಕಿ ಕೇಜ್, ಪ್ರಶಾಂತ್ ಪ್ರಕಾಶ್, ವೆಂಕಪ್ಪ ಅಂಬಾಜಿ ಸುಗಟೇಕರ್ ಸೇರಿದಂತೆ ದೇಶಾದ್ಯಂತ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ ಮಾಡಿದ್ದರು.
ಈ ಸಮಾರಂಭದ ಬಳಿಕ ರಾಷ್ಟ್ರಪತಿಯವರು ಹೈ ಟೀ ಸಮಾರಂಭ ಆಯೋಜನೆ ಮಾಡಿದ್ದರು. ಅತಿಥಿಗಳಿಗೆ ಟೀ ಪಾರ್ಟಿ ಆಯೋಜನೆ ಮಾಡುವುದಕ್ಕೆ ಹೀಗೆ ಹೇಳಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಉಪಸ್ಥಿತರಿದ್ದರು.
ಈ ವೇಳೆ ಕಾರ್ಯಕ್ರಮದಲ್ಲಿ ಅನಂತ್ ನಾಗ್ ಹಾಗೂ ಮೋದಿ ಪರಸ್ಪರ ಮಾತುಕತೆ ನಡೆಸಿದರು. ಆ ಸಂದರ್ಭದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೋದಿಯವರು ಅನಂತ್ ನಾಗ್ ಅವರ ಕೈ ಹಿಡಿದುಕೊಂಡು ಅಭಿನಂದನೆ ತಿಳಿಸುತ್ತಿರುವುದು ಕಂಡು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



