ಚಿಕ್ಕಬಳ್ಳಾಪುರ: ಮಸೀದಿ ಆವರಣದಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರು ಮೌಲ್ವಿಯ ತಂದೆಯ ವಿರುದ್ಧ ಎಫ್‌ಐಆರ್ ದಾಖಲಿಸಿ ನಂತರ ಬಂಧನಕ್ಕೊಳಪಡಿಸಿದ್ದಾರೆ.

ಚಿಕ್ಕಬಳ್ಳಾಪುರ; 6 ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ.
ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರು ಮೌಲ್ವಿಯ ತಂದೆಯವಿರುದ್ಧ ಎಫ್‌ಐಆರ್ ದಾಖಲಿಸಿ ನಂತರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.
ಮೌಲ್ವಿಯ ತಂದೆಯಾಗಿರುವ ಆರೋಪಿಗೆ ಗೌರವದ ದೃಷ್ಟಿಯಿಂದ ಮಸೀದಿ ಆವರಣದಲ್ಲಿ ಉಳಿಯಲು ಕೊಠಡಿ ನೀಡಲಾಗಿದ್ದು, ಇದನ್ನು ದುರುಪಯೋಗಪಡಿಸಿಕೊಂಡಿರುವ ಆರೋಪಿಯು ಬಾಲಕಿಗೆ ಚಾಕೊಲೇಟ್ ಕೊಡಿಸುವ ಆಸೆ ತೋರಿಸಿ, ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಲಾಗಿದೆ.
ಉತ್ತರ ಪ್ರದೇಶದ ಮೂಲದವನಾಗಿರುವ ಆರೋಪಿ, 20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕೆ ಬಂದಿದ್ದು, ಅಂದಿನಿಂದ ಪಾದಚಾರಿ ಮಾರ್ಗದಲ್ಲಿ ಬಟ್ಟೆಗಳನ್ನು ಮಾರಾಟ ಮಾಡಿ, ಜೀವನ ಸಾಗಿಸುತ್ತಿದ್ದ ಎನ್ನಲಾಗಿದೆ.
ಘಟನೆ ಬೆಳಕಿಗೆ ಬಂದ ನಂತರ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಮಸೀದಿಯಲ್ಲಿ ಆರೋಪಿಗೆ ಆಶ್ರಯ ನೀಡಿದ ಹಿನ್ನೆಲೆಯಲ್ಲಿ ಸ್ಥಳೀಯ ಜಮಾತ್ ವಿರುದ್ಧ ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



