'ಮೊದ್ಲು ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ ಮಾಡೋಣ': Kamal Hassan ಗೆ ಜಡ್ಜ್ ಮೌಖಿಕ ತಾಕೀತು; Video
ಅವರ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತಡೆಯೊಡ್ಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಏನೇ ಆದರೂ ಕ್ಷಮೆ ಕೇಳುವುದಿಲ್ಲ ಎಂದು ಮೊಂಡಾಟ ಮೆರೆದಿದ್ದರು.

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ನೀಡಿ ಕರ್ನಾಟಕದಲ್ಲಿ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿರುವ ನಟ ಕಮಲ್ ಹಾಸನ್ ಅವರಿಗೆ ಹೈಕೋರ್ಟ್ ನ್ಯಾಯಾಧೀಶರು ಕೂಡ ಕ್ಷಮೆ ಕೇಳಲು ತಾಕೀತು ಮಾಡಿದ್ದಾರೆ.
ಅವರ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತಡೆಯೊಡ್ಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಏನೇ ಆದರೂ ಕ್ಷಮೆ ಕೇಳುವುದಿಲ್ಲ ಎಂದು ಮೊಂಡಾಟ ಮೆರೆದಿದ್ದರು. ‘ನಾನು ಯಾವುದೇ ತಪ್ಪು ಮಾಡಿಲ್ಲ, ಕ್ಷಮೆಯಾಚಿಸುವುದಿಲ್ಲ, ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ರಾಜಕೀಯ ಅಜೆಂಡಾ ಇಟ್ಟುಕೊಂಡು ಮಾಡುತ್ತಿದ್ದಾರೆ ಎಂದಿದ್ದರು.
ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ ಅವರ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಹೇಳಿತ್ತು.
ಇಂದು ಹೈಕೋರ್ಟ್ ನಲ್ಲಿ ಕಮಲ್ ಹಾಸನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂತು. ಈ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕ್ಷಮೆ ಕೇಳಿದ್ರೆ ಮಾತ್ರ ಅರ್ಜಿ ಪರಿಗಣಿಸುತ್ತೇವೆ. ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ? ಕನ್ನಡ ಭಾಷೆ ತಮಿಳಿಂದ ಹುಟ್ಟಿದೆ ಅನ್ನೋಕೆ ಅವರೇನು ಇತಿಹಾಸಕಾರರಾ? ಈ ಹಿಂದೆ ಸಿ.ರಾಜಗೋಪಾಲಾಚಾರಿ ಕೂಡ ಕ್ಷಮೆಯನ್ನು ಕೇಳಿದ್ದರು. ಇವತ್ತಿನ ಪರಿಸ್ಥಿತಿ ನಿರ್ಮಾಣಕ್ಕೆ ನೀವೇ ಕಾರಣ, ಈ ರೀತಿ ಹೇಳಿಕೆ ನೀಡಬಾರದು. ಕಮಲ್ ಹಾಸನ್ ಸಾಮಾನ್ಯ ವ್ಯಕ್ತಿ ಅಲ್ಲ, ಪಬ್ಲಿಕ್ ಫಿಗರ್. ಅವರು ಮೊದಲು ಕ್ಷಮೆ ಕೇಳಲಿ, ಆಮೇಲೆ ಅರ್ಜಿ ಪರಿಗಣಿಸ್ತೇವೆ’ ಎಂದು ಖಡಾಖಂಡಿತವಾಗಿ ಹೇಳಿದರು.
ಇದಕ್ಕೆ ಕಮಲ್ ಹಾಸನ್ ಪರ ವಕೀಲರು ಪ್ರತಿಕ್ರಿಯೆ ನೀಡಲು ಮಧ್ಯಾಹ್ನ 2.30ರವರೆಗೆ ಸಮಯಾವಕಾಶ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



