RCB ಗೆಲುವಿನ ಸಂಭ್ರಮಾಚರಣೆ ವೇಳೆ ಹೃದಯಾಘಾತ; ಅಭಿಮಾನಿ ಸಾವು
ಆರ್‌ಸಿಬಿ (RCB) ಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ಹಿನ್ನೆಲೆ ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ವಿಜಯೋತ್ಸವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಬೆಳಗಾವಿ: ಪಂಜಾಬ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವನ್ನು ಸಂಭ್ರಮಿಸುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಹೃದಯಾಘಾತದಿಂದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಆರ್‌ಸಿಬಿ (RCB) ಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ಹಿನ್ನೆಲೆ ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ವಿಜಯೋತ್ಸವ ವೇಳೆ ಕುಣಿದು ಕುಪ್ಪಳಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಮಂಜುನಾಥ್ ಕುಂಬಾರ್ (25) ಹೃದಯಾಘಾತದಿಂದ ಸಾವನ್ನಪ್ಪಿದ ಯುವಕನಾಗಿದ್ದಾನೆ.
ಮಂಗಳವಾರ ಅಹಮದಾಬಾದ್‌ನಲ್ಲಿ ಐಪಿಎಲ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ಸಾಧಿಸಿದ ಹಿನ್ನೆಲೆ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಈ ವೇಳೆ ಹಾಡು ಹಾಕಿ ಕುಣಿಯುತ್ತಿದ್ದಾಗ ಮಂಜುನಾಥ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆ ಮಂಜುನಾಥ್ ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



