ಮೈಸೂರು: ಬೈಕ್ ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ದಂಪತಿ ಸೇರಿ ಮೂವರು ಸಾವು
ಮೃತರನ್ನು ಹಂಚೀಪುರ ಗ್ರಾಮದ ಚಿಕ್ಕಸ್ವಾಮಿ(45), ಅವರ ಪತ್ನಿ ರೂಪಾ(38) ಮತ್ತು ಕಣೇನೂರು ಗ್ರಾಮದ ಚನ್ನಮಲ್ಲಮ್ಮ(55) ಎಂದು ಗುರುತಿಸಲಾಗಿದೆ.

ಮೈಸೂರು: ನಂಜನಗೂಡು ತಾಲೂಕಿನ ಸಂಗಮ ಮತ್ತು ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಬುಧವಾರ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಮತ್ತು ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರನ್ನು ಹಂಚೀಪುರ ಗ್ರಾಮದ ಚಿಕ್ಕಸ್ವಾಮಿ(45), ಅವರ ಪತ್ನಿ ರೂಪಾ(38) ಮತ್ತು ಕಣೇನೂರು ಗ್ರಾಮದ ಚನ್ನಮಲ್ಲಮ್ಮ(55) ಎಂದು ಗುರುತಿಸಲಾಗಿದೆ.
ಚಿಕ್ಕಸ್ವಾಮಿ, ಪತ್ನಿ ರೂಪಾ ಮತ್ತು ಚನ್ನಮಲ್ಲಮ್ಮ ಅವರಿದ್ದ ಬೈಕ್ಗೆ ಲಾರಿ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಮೂವರೂ ರಸ್ತೆ ಮೇಲೆ ಬಿದ್ದಿದ್ದಾರೆ. ಈ ವೇಳೆ, ಲಾರಿಯು ಅವರ ಮೇಲೆ ಹರಿದಿದೆ. ಚಕ್ರಕ್ಕೆ ಸಿಲುಕಿದ ಮೂವರು ನುಜ್ಜುಗುಜ್ಜಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.
ಡಿವೈಎಸ್ಪಿ ರಘು, ಪಿಎಸ್ಐ ಚೇತನ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತವಾದ ಲಾರಿಯು ತಮಿಳುನಾಡು ಮೂಲದ್ದಾಗಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



