Hemavati Link Canal: ಕೂಡಲೇ ಯೋಜನೆ ನಿಲ್ಲಿಸಿ; ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳ ಹಿಂಪಡೆಯಿರಿ; ಸಿಎಂಗೆ ಸೋಮಣ್ಣ ಆಗ್ರಹ
ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ.

ಬೆಂಗಳೂರು: ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯನ್ನು ಕೂಡಲೇ ನಿಲ್ಲಿಸಿ, ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯಿಂದ ತುಮಕೂರು ಭಾಗದ ರೈತರಿಗೆ ಅನ್ಯಾಯ ಆಗುತ್ತಿದ್ದು, ತಕ್ಷಣವೇ ಈ ಯೋಜನೆಯ ಕಾಮಗಾರಿಯನ್ನು ನಿಲ್ಲಿಸುವಂತೆ ಸಾಕಷ್ಟು ಭಾರಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರೂ, ಅವರು ಈ ಬಗ್ಗೆ ಗಮನಹರಿಸದಿರುವುದು ಹಾಗೂ ಈ ಅನ್ಯಾಯದ ವಿರುದ್ಧ ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ ಎಂದು ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ ಅವರು ಸಹ ಪ್ರಸ್ತುತ ಬೆಳವಣಿಗೆಯ ಬಗ್ಗೆ ದೂರವಾಣಿ ಮುಖಾಂತರ ಚರ್ಚಿಸಿದ್ದು, ಅತ್ಯಂತ ಕಳವಳವನ್ನು ವ್ಯಕ್ತಪಡಿಸಿದ್ದಾರೆ.
ಆದಾಗ್ಯೂ ಈ ಭಾಗದ ಜನರ ಹಿತದೃಷ್ಟಿಯಿಂದ ಹಾಗೂ ರೈತರ ಜೀವನಾಡಿ ನೀರಿಲ್ಲದೇ ಬದುಕು ಇಲ್ಲ ಎಂಬುದರ ಸಾಧಕ ಬಾಧಕಗಳ ಬಗ್ಗೆ ರೈತರ, ಮಠಾಧೀಶರ ಹಾಗೂ ಜನಸಾಮಾನ್ಯರ ಮೇಲಿನ ದೌರ್ಜನ್ಯ ನಿವಾರಣೆಗೊಳಿಸಲು ಮತ್ತು ವಿವಾದಿತ ಯೋಜನೆಯ ನಿಜವಾದ ತಾಂತ್ರಿಕ ಅಂಶಗಳ ಮೇಲೆ ಚರ್ಚಿಸಲು ಈ ಯೋಜನಾ ವ್ಯಾಪ್ತಿಯಲ್ಲಿ ಬರುವ ಸಂಬಂಧಪಟ್ಟ ಎಲ್ಲಾ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರ ಉಪಸ್ಥಿತಿಯಲ್ಲಿ ತಕ್ಷಣ ಏರ್ಪಡಿಸುವಂತೆ ಒತ್ತಾಯಿಸಿದ್ದಾರೆ.
ಈ ಸಭೆಗೆ ತಾಂತ್ರಿಕ ತಜ್ಞರನ್ನು ಮತ್ತು ಈ ಹಿಂದೆ ಯೋಜನೆಯ ಕಾರ್ಯಸಾಧ್ಯತೆ ಇಲ್ಲವೆಂದು ಈಗ ಯೋಜನೆಯ ಕಾರ್ಯಸಾಧ್ಯತೆಯ ಬಗ್ಗೆ ಒಪ್ಪಿಗೆ ನೀಡಿರುವ ಅಧಿಕಾರಿಗಳನ್ನು ಸಹ ಈ ಸಭೆಯಲ್ಲಿ ಹಾಜರಿರುವಂತೆ ಸೋಮಣ್ಣ ಅವರು ಮನವಿ ಮಾಡಿದ್ದಾರೆ.

ಹೇಮಾವತಿ ಕಾಲುವೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ: 3 ಶಾಸಕರು, ಇಬ್ಬರು ಶ್ರೀಗಳು ಸೇರಿ 11 ಮಂದಿ ವಿರುದ್ಧ FIR ದಾಖಲು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


