ಜೂನ್ 8 ರಿಂದ ರಾಜ್ಯದಲ್ಲಿ ಮತ್ತೆ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಉತ್ತರ ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ, ಜಲಾಶಯದಿಂದ ನೀರು ಬಿಡುಗಡೆಯಾಗುವ ಸಾಧ್ಯತೆ ಇದೆ.

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕೊಂಚ ವಿರಾಮವಾಗಿದ್ದ ಮುಂಗಾರು ಮಳೆ ನಾಳೆ ಜೂನ್ 8ರಿಂದ ಮತ್ತೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ, ಜಲಾಶಯದಿಂದ ನೀರು ಬಿಡುಗಡೆಯಾಗುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ ಮಳೆ ಬಿಡುವು ನೀಡಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ಭಾರಿ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಜೂನ್ 9 ರವರೆಗೆ ರಾಜ್ಯಾದ್ಯಂತ ಅತಿ ಸಾಧಾರಣ ಮಳೆಯಾಗಲಿದೆ. ಜೂ. 10 ರಿಂದ 12ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


