ರಾಜ್ಯ

ಆನೇಕಲ್‌: ಆಟವಾಡ್ತಿದ್ದಾಗ ವಿದ್ಯುತ್​ ತಗುಲಿ 11 ವರ್ಷದ ಬಾಲಕಿ ಸಾವು

ಮೃತ ಬಾಲಕಿಯನ್ನು ನಾರಾಯಣಘಟ್ಟ ಗ್ರಾಮದ ತನಿಷ್ಕಾ(11) ಎಂದು ಗುರುತಿಸಲಾಗಿದ್ದು, ಶಾಲೆಗೆ ರಜೆ ಇದ್ದ ಕಾರಣ ಮನೆ ಬಳಿಯೇ ಆಟವಾಡುತ್ತಿದ್ದಳು.

ಆನೇಕಲ್‌: ಆಟವಾಡ್ತಿದ್ದಾಗ ವಿದ್ಯುತ್​ ತಗುಲಿ 11 ವರ್ಷದ ಬಾಲಕಿ ಸಾವು
ತನಿಷ್ಕಾ
Published On :

ಬೆಂಗಳೂರು: ಬೆಂಗಳೂರಿನ ಹೊರವಲಯದ ಆನೇಕಲ್‌ ತಾಲೂಕಿನ ನಾರಾಯಣಘಟ್ಟದಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕಿ ವಿದ್ಯುತ್‌ ತಗುಲಿ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.

ಮೃತ ಬಾಲಕಿಯನ್ನು ನಾರಾಯಣಘಟ್ಟ ಗ್ರಾಮದ ತನಿಷ್ಕಾ(11) ಎಂದು ಗುರುತಿಸಲಾಗಿದ್ದು, ಶಾಲೆಗೆ ರಜೆ ಇದ್ದ ಕಾರಣ ಮನೆ ಬಳಿಯೇ ಆಟವಾಡುತ್ತಿದ್ದಳು.

ವಿದ್ಯುತ್‌ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್‌ ತಗುಲಿದೆ. ವಿದ್ಯುತ್‌ ಶಾಕ್‌ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದು, ಪೋಷಕರ ಆಕ್ರಂಧನ ಮುಗಿಲುಟ್ಟಿದೆ.

ಸೂರ್ಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪೋಷಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.