ರಾಜ್ಯ

RCB ಫ್ರಾಂಚೈಸಿ ಖರೀದಿ ಮಾಡುತ್ತೀರಂತೆ...! ಡಿಕೆ ಶಿವಕುಮಾರ್ ಹೇಳಿದ್ದೇನು?

RCB ತಂಡವನ್ನು ತಾವು ಖರೀದಿ ಮಾಡುತ್ತಾರೆ ಎಂಬ ವದಂತಿಗಳಿಗೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಾನೇನು ಹುಚ್ಚನಲ್ಲ ಎಂದು ಹೇಳಿದ್ದಾರೆ.

RCB ಫ್ರಾಂಚೈಸಿ ಖರೀದಿ ಮಾಡುತ್ತೀರಂತೆ...! ಡಿಕೆ ಶಿವಕುಮಾರ್ ಹೇಳಿದ್ದೇನು?
RCB ತಂಡ - ಡಿಸಿಎಂ ಡಿಕೆ ಶಿವಕುಮಾರ್
Published On :

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ನಂತರ RCB ಫ್ರಾಂಚೈಸಿ ಮಾರಾಟದ ವಿಷಯ ಮುನ್ನೆಲೆಗೆ ಬಂದಿದೆ.

RCB ತಂಡವನ್ನು ತಾವು ಖರೀದಿ ಮಾಡುತ್ತಾರೆ ಎಂಬ ವದಂತಿಗಳಿಗೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಾನೇನು ಹುಚ್ಚನಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಎನ್ಐ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ನಾನು ಹುಚ್ಚನಲ್ಲ. ನಾನು ರಾಯಲ್ ಚಾಲೆಂಜ್ ವಿಸ್ಕಿಯನ್ನೇ ಕುಡಿಯಲ್ಲ. ನನಗೇಕೆ RCB ಟೀಮ್ ಬೇಕು? RCB ಟೀಮ್ ಅನ್ನು ನಾನು ಖರೀದಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಹಿಂದಿನಿಂದಲೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(KSCA)ಯ ಸದಸ್ಯ ಮಾತ್ರ. ಈ ಹಿಂದೆ ನನಗೆ ಕೆಎಸ್‌ಸಿಎ ಮ್ಯಾನೇಜ್‌ಮೆಂಟ್‌ಗೆ ಸೇರುವ ಆಫರ್ ಬಂದಿತ್ತು. ಆದರೆ ನನಗೆ ಸಮಯವಿಲ್ಲ. ನನಗೆ ಸಮಯವಿಲ್ಲದ ಕಾರಣ ನನ್ನ ಎಜುಕೇಷನ್ ಇನ್ಸ್‌ಟಿಟ್ಯೂಷನ್ ಅನ್ನು ನೋಡಿಕೊಳ್ಳಲು ನಮ್ಮ ಕುಟುಂಬದ ಬೇರೆ ಸದಸ್ಯರಿಗೆ ಬಿಟ್ಟಿದ್ದೇನೆ ಎಂದು ಹೇಳಿದ್ದಾರೆ.

ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಈ ದುರಂತದ ಮಧ್ಯೆಯೇ ಕ್ರೀಡಾಂಗಣದ ಒಳಗೆ ಆರ್ ಸಿಬಿ ಆಟಗಾರರ ಜೊತೆ ಕಾಣಿಸಿಕೊಂಡಿದ್ದ ಡಿಕೆ ಶಿವಕುಮಾರ್ ಅವರು, ಐಪಿಎಲ್ ಟ್ರೋಫಿ ಎತ್ತಿ ಹಿಡಿದು, ಅದಕ್ಕೆ ಮುತ್ತಿಟ್ಟು ಸಂಭ್ರಮಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.