ರಾಜ್ಯ

ಅನಧಿಕೃತ ಕಟ್ಟಡಗಳ ಗುರುತಿಸಿ, ಕೂಡಲೇ ತೆರವುಗೊಳಿಸಿ: ಅಧಿಕಾರಿಗಳಿಗೆ BBMP ಖಡಕ್ ಸೂಚನೆ

ಬಿಬಿಎಂಪಿ ಮುಖ್ಯ ಆಯುಕ್ತರು ಮಹದೇವಪುರ ವ್ಯಾಪ್ತಿಯನಲ್ಲೂರು ಮೆಟ್ರೋ ಹಳ್ಳಿ ಸ್ಟೇಷನ್ ನಿಂದ ನಲ್ಲೂರಹಳ್ಳಿ ಬೋರ್ ವೆಲ್ ರಸ್ತೆ, ವೈಟ್ ಫೀಲ್ಡ್ ಮುಖ್ಯರಸ್ತೆವರೆಗೆ ಬುಧವಾರ ಪರಿಶೀಲನೆ ನಡೆಸಿದರು.

ಅನಧಿಕೃತ ಕಟ್ಟಡಗಳ ಗುರುತಿಸಿ, ಕೂಡಲೇ ತೆರವುಗೊಳಿಸಿ: ಅಧಿಕಾರಿಗಳಿಗೆ BBMP ಖಡಕ್ ಸೂಚನೆ
ಪರಿಶೀಲನೆ ನಡೆಸುತ್ತಿರುವ ಬಿಬಿಎಂಪಿ ಆಯುಕ್ತರು.
Published On :

ಬೆಂಗಳೂರು: ಅನಧಿಕೃತ ಕಟ್ಟಡಗಳ ಗುರುತಿಸಿ ಕೂಡಲೇ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಬುಧವಾರ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತರು ಮಹದೇವಪುರ ವ್ಯಾಪ್ತಿಯ ನಲ್ಲೂರು ಮೆಟ್ರೋ ಹಳ್ಳಿ ಸ್ಟೇಷನ್ ನಿಂದ ನಲ್ಲೂರಹಳ್ಳಿ ಬೋರ್ ವೆಲ್ ರಸ್ತೆ, ವೈಟ್ ಫೀಲ್ಡ್ ಮುಖ್ಯರಸ್ತೆವರೆಗೆ ಬುಧವಾರ ಪರಿಶೀಲನೆ ನಡೆಸಿದರು,

ನಲ್ಲೂರಹಳ್ಳಿ ಕಾಲೋನಿಯ 3ನೇ ಅಡ್ಡರಸ್ತೆ, 7ನೇ ಅಡ್ಡ ರಸ್ತೆಯಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ನಿಯಮಾನುಸಾರ ಅನಧಿಕೃತ ಕಟ್ಟಡದ ಭಾಗವನ್ನು ತ್ವರಿತವಾಗಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ನಲ್ಲೂರಹಳ್ಳಿ ಮೆಟ್ರೋ ಸ್ಟೇಷನ್ ನಿಂದ ನಲ್ಲೂರಹಳ್ಳಿ ಬೋರ್ವೆಲ್ ರಸ್ತೆ ಮುಖಾಂತರ ವೈಟ್ ಫೀಲ್ಡ್ ಮುಖ್ಯ ರಸ್ತೆವರೆಗೆ ರಸ್ತೆ ಅಗಲೀಕರಣಕ್ಕೆ ಸೂಚಿಸಿದರು.

ಡಾಡ್ಸ್ ವರ್ತ್ ಎನ್‌ಕ್ಷೇವ್ ರೋಡ್ ಬಳಿ ಚರಂಡಿಯ ನೀರು ರಸ್ತೆಗೆ ಬರುತ್ತಿದ್ದು, ಪರಿಶೀಲನೆ ನಡೆಸಿ ಕಟ್ಟಡದ ಮಾಲೀಕರಿಗೆ ನೋಟಿಸ್ ನೀಡಲು ಹಾಗೂ ಕಟ್ಟಡ ಮಾಲೀಕರಿಗೆ ದಂಡ ವಿಧಿಸಲು ನಿರ್ದೇಶಿಸಿದರು.

ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿ ರುವುದು ಕಂಡು ಬಂದ ಹಿನ್ನೆಲೆಯಲ್ಲಿ ವಾಹನ ಗಳಮಾಲೀಕರಿಗೆ ದಂಡ ವಿಧಿಸಿತೆರವು ಮಾಡುವಂತೆ ಸಂಚಾರಿ ಪೊಲೀಸರಿಗೆ ತಿಳಿಸಿದರು.

ನಲ್ಲೂರಹಳ್ಳ ರಾಜಕಾಲುವೆಗೆ ತಡೆಗೋಡೆ ನಿರ್ಮಿಸುವ ಅಗತ್ಯವಿದ್ದು, ತ್ವರಿತವಾಗಿ ಸೂಕ್ತ ಕ್ರಮ ಕಗೊಂಡು ನಾಲಾ ಪಕ್ಕದಲ್ಲಿ ನಿರ್ಮಿಸಿರುವ ಅಕ್ರಮ ಕಟ್ಟಡ ತೆರವುಗೊಳಿಸಿ, ಬಫರ್‌ಜೋನ್‌ನಲ್ಲಿ ಯಾವುದೇ ಕಟ್ಟಡಗಳ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ನೀಡದಂತೆ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.