ಹೇಮಾವತಿ ಲಿಂಕ್ ಕೆನಾಲ್ ಸ್ಥಳಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ: ಯೋಜನೆ ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹ
ಕಾಮಗಾರಿ ಅವೈಜ್ಞಾನಿಕವಾಗಿದೆ. ಈ ಯೋಜನೆ ಕುರಿತಂತೆ ದೇವೇಗೌಡರು, ಕುಮಾರಸ್ವಾಮಿಯ ಜೊತೆ ಮಾತನಾಡಿ ಯಾರಿಗೂ ಅನ್ಯಾಯವಾಗಬಾರದು ಎಂಬುದನ್ನು ಮನವರಿಕೆ ಮಾಡಿದ್ದೇನೆ.

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಅವೈಜ್ಞಾನಿಕ ಯೋಜನೆಯಾಗಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಬುಧವಾರ ಆಗ್ರಹಿಸಿದರು.
ತಾಲೂಕಿನ ನಿಟ್ಟೂರು ಹೋಬಳಿ ಸುಂಕಪುರ ಬಳಿ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಲ್ ಕಾಮಗಾರಿ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಮಾತನಾಡಿದ ಅವರು, ಕಾಮಗಾರಿ ಅವೈಜ್ಞಾನಿಕವಾಗಿದೆ. ಈ ಯೋಜನೆ ಕುರಿತಂತೆ ದೇವೇಗೌಡರು, ಕುಮಾರಸ್ವಾಮಿಯ ಜೊತೆ ಮಾತನಾಡಿ ಯಾರಿಗೂ ಅನ್ಯಾಯವಾಗಬಾರದು ಎಂಬುದನ್ನು ಮನವರಿಕೆ ಮಾಡಿದ್ದೇನೆ. ರಾಜ್ಯ ಸರ್ಕಾರ ಪಾಪದ ವ್ಯವಸ್ಥೆಯಲ್ಲಿ ಮುಂಂದಿನ ದಿನಗಳಲ್ಲಿ ಶಾಪಗ್ರಸ್ತವಾಗಬಹುದು ಇದನ್ನು ಅರ್ಥ ಕಾಮಗಾರಿಯನ್ನು ಸ್ಥಗಿತ ಮಾಡಬೇಕು ಎಂದು ಹೇಳಿದರು.
ಗುಬ್ಬಿ ತಾಲೂಕಿಗೆ ಆಗಿರುವಂತ ಅನ್ಯಾಯವನ್ನು ಸರಿಪಡಿಸುವ ಜವಾಬ್ದಾರಿ ನನ್ನದು. ಇದನು ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಸರಿಪಡಿಸುತ್ತೇನೆ. ಕಾಮಗಾರಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನೀರಾವರಿ ಸಚಿವ ಡಿಕೆ ಶಿವಕುಮಾರ್ ಜೊತೆ ಮಾತನಾಡುತ್ತೇನೆ. ಅಧಿಕಾರಿಗಳು ನಾನೊಬ್ಬ ಕೇಂದ್ರ ಸಚಿವ ಇದ್ದೇನೆ ಎಂಬುದನ್ನು ಮರೆಯಬಾರದು.
ಒಂದೊಂದು ಸರ್ಕಾರ ಬಂದಾಗ ಒಂದೊಂದು ರೀತಿಯಲ್ಲಿ ಯೋಜನೆ ರೂಪಿಸಿದ್ದಾರೆ. ಇಂದು ಗುಬ್ಬಿ ತಾಲೂಕಿನಲ್ಲಿ ಹೇಮಾವತಿ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ. ಇದಕ್ಕೆ ನಾವುಗಳು ಪರಿಹಾರ ಹುಡುಕಬೇಕಾಗಿದೆ. ಜನಪರ ಕಾರ್ಯಕ್ರಮಗಳಿಗೆ ಹಕ್ಕುಚ್ಯುತಿಯಾಗುವುದಕ್ಕೆ ವಿ.ಸೋಮಣ್ಣ ಬಿಡುವುದಿಲ್ಲ ಮತ್ತು ಸೋಲುವುದಿಲ್ಲ ಎಂದು ತಿಳಿಸಿದರು.
ಇದೇ ವೇಳೆ ಯೋಜನೆ ತುಮಕೂರಿನ ರೈತರ ಮೇಲೆ ಪರಿಣಾಮ ಬೀರುತ್ತಿದ್ದರೂ, ಯೋಜನೆಯ ಪರವಾಗಿ ಕಾರ್ಯಸಾಧ್ಯತಾ ವರದಿಯನ್ನು ನೀಡಿದ ತಜ್ಞರ ಸಮಿತಿ ಮುಖ್ಯಸ್ಥ, ನಿವೃತ್ತ ಎಂಜಿನಿಯರ್ ಜಯಪ್ರಕಾಶ್ ಮತ್ತು ಡಿ.ಕೆ. ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರ ಅವರನ್ನು ಸೋಮಣ್ಣ ಅವರು ತರಾಟೆಗೆ ತೆಗೆದುಕೊಂಡರು.
ಯೋಜನೆಗಾಗಿ ಗುತ್ತಿಗೆದಾರರು ಈಗಾಗಲೇ ನೂರಾರು ಕೋಟಿ ಮೌಲ್ಯದ ಪೈಪ್‌ಗಳನ್ನು ಖರೀದಿಸಿದ್ದು, ಸರ್ಕಾರ ಈಗಾಗಲೇ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಹಚರರಾದ ತುಮಕೂರು ಗ್ರಾಮೀಣ ಶಾಸಕ ಬಿ. ಸುರೇಶ್ ಗೌಡ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಅವರು ಸೋಮಣ್ಣ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ಇರುವುದು ಹಲವರ ಹುಬ್ಬೇರುವಂತೆ ಮಾಡಿತ್ತು. ನಂತರ ವಿಜಯೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದ ನಂತರ ಸುರೇಶ್ ಹಾಗೂ ರವಿಶಂಕರ್ ಅವರೂ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ವಿಚಾರ ತಣ್ಣಗಾಯಿತು.

ಹೇಮಾವತಿ ಕಾಲುವೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ: 3 ಶಾಸಕರು, ಇಬ್ಬರು ಶ್ರೀಗಳು ಸೇರಿ 11 ಮಂದಿ ವಿರುದ್ಧ FIR ದಾಖಲು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


