ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ 108 ಆಂಬ್ಯುಲೆನ್ಸ್ ನಿರ್ವಹಣೆ
ರಾಜ್ಯ ಸರ್ಕಾರದ ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ಭರವಸೆ ಮೂಡಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ. ಉಳಿಸುತ್ತದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ 108 ಆಂಬ್ಯುಲೆನ್ಸ್ ಸೇವೆಯನ್ನು ಆರೋಗ್ಯ ಇಲಾಖೆಯ ನೇರ ನಿರ್ವಹಣೆಯಡಿ ತರುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಹೇಳಿದ್ದಾರೆ.
ಈ ಉಪಕ್ರಮವು 108 ಆಂಬ್ಯುಲೆನ್ಸ್ ಸೇವೆಯನ್ನು ಖಾಸಗಿ ನಿಯಂತ್ರಣದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆಯಡಿ ತರಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ಭರವಸೆ ಮೂಡಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ. ಉಳಿಸುತ್ತದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
715 ಆಂಬ್ಯುಲೆನ್ಸ್‌ಗಳ ಸಮೂಹವನ್ನು ನಿರ್ವಹಿಸಲು ರಾಜ್ಯ ಮಟ್ಟದಲ್ಲಿ ಕೇಂದ್ರೀಯ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಸ್ಥಾಪಿಸಲಾಗುವುದು ಮತ್ತು ಇದಕ್ಕಾಗಿ '112 NG-ERSS' ಸಾಫ್ಟ್‌ವೇರ್ ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿಯೂ 108 ಕಂಟ್ರೋಲ್ ಸೆಂಟರ್ ಗಳು ಕಾರ್ಯನಿರ್ವಹಿಸಲಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆಂಬ್ಯುಲೆನ್ಸ್ ಗಳಿಗೆ ಚಾಲಕರು ಮತ್ತು ನರ್ಸಿಂಗ್ ಸಿಬ್ಬಂದಿಯನ್ನು ಜಿಲ್ಲಾ ಮಟ್ಟದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು. ಆರಂಭದಲ್ಲಿ ಚಾಮರಾಜ ನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ. ಅಲ್ಲದೇ 108 ಹೊರತಾಗಿ ರಾಜ್ಯದಲ್ಲಿರುವ 1000 ಕ್ಕೂ ಹೆಚ್ಚು ಸ್ಟೇಟ್ ಅಂಬ್ಯುಲೆನ್ಸ್ ಗಳನ್ನು ಕೂಡಾ 108 ಕಮಾಂಡ್ ಸೆಂಟರ್ ಅಧೀನಕ್ಕೆ ತರಲು ಯೋಜನೆ ರೂಪಿಸಲಾಗಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



