ಏರ್ ಇಂಡಿಯಾ ವಿಮಾನ ಪತನ: ಬೆಂಗಳೂರು-ಅಹಮದಾಬಾದ್ ಇಂಡಿಗೋ ವಿಮಾನ ಹಾರಾಟ ರದ್ದು
ಬೆಂಗಳೂರಿನಿಂದ ಅಹಮದಾಬಾದ್‌ಗೆ ಹೋಗಬೇಕಿದ್ದ ಇಂಡಿಗೋ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (BLR) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಲಂಡನ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ AI171 ಅಪಘಾತದ ನಂತರ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ-ಅಹಮದಾಬಾದ್'ಗೆ ತೆರಳಬೇಕಿದ್ದ ವಿಮಾನಗಳ ಹಾರಾಟವನ್ನೂ ರದ್ದುಗೊಳಿಸಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ,
ಬೆಂಗಳೂರಿನಿಂದ ಅಹಮದಾಬಾದ್‌ಗೆ ಹೋಗಬೇಕಿದ್ದ ಇಂಡಿಗೋ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (BLR) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದರೆ, ಬೆಂಗಳೂರಿನಿಂದ ಅಹಮದಾಬಾದ್‌ಗೆ ಹೋಗುವ ಇತರ ವಿಮಾನಗಳ ಹಾರಾಟದ ಮೇಲೆ ಯಾವುದೇ ಪರಿಣಾಮವಿಲ್ಲ ಎಂದು ದೃಢಪಡಿಸಿದ್ದಾರೆ.
ಅಹಮದಾಬಾದ್‌ನಲ್ಲಿ ಜೂನ್12ರಂದು ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದೆ. ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಮಾಡಿದ ಕೆಲವೇ ಕ್ಷಣಗಳಲ್ಲಿ ಈ ದುರಂತ ಸಂಭವಿಸಿದೆ. ಜನನಿಬಿಡ ಪ್ರದೇಶವಾದ ಮೇಘಾನಿ ನಗರದ ದುರಂತ ಸಂಭವಿಸಿದ್ದು, ದುರ್ಘಟನೆಯಲ್ಲಿ 241 ಮಂದಿ ದುರ್ಮರಣವನ್ನಪ್ಪಿದ್ದಾರೆ

Air India ವಿಮಾನ ದುರಂತ: ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಕರೀಷ್ಮಾ ಕಪೂರ್ ಮಾಜಿ ಪತಿ ಹೃದಯಾಘಾತದಿಂದ ನಿಧನ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


