ರಾಜ್ಯ

ರಾಜ್ಯದಲ್ಲಿ ಇನ್ನೂ 3 ದಿನ ಮಳೆ: ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ

ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಂತಹ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಿದೆ.

ರಾಜ್ಯದಲ್ಲಿ ಇನ್ನೂ 3 ದಿನ ಮಳೆ: ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬೆಂಗಳೂರಿನಲ್ಲಿ ಶನಿವಾರ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜೂನ್ 16 ರವರೆಗೆ ಮಧ್ಯಂತರ ಮಳೆಯಾಗುವ ಸಾಧ್ಯತೆಯಿದೆ ಭಾರತ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.

ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿರುವುದರಿಂದ, ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಭಾಗದಲ್ಲಿ ಜೂನ್ 15ರಂದು ಭಾರೀ ಮಳೆಯಾಗುವ ಸಾಧ್ಯತೆಗಳಿರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಜೂನ್ 17 ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆಯಿದ್ದು, ಜೂನ್ 18 ರವರೆಗೆ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಕರ್ನಾಟಕದ ಇತರ ಸ್ಥಳಗಳಿಗೆ, ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಂತಹ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಿದೆ.

ಶನಿವಾರ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಅತಿ ಹೆಚ್ಚು 11 ಸೆಂ.ಮೀ ಮಳೆಯಾಗಿದೆ. ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮುಂದಿನ ವಾರ ಕರಾವಳಿ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಜೂನ್ 17 ರವರೆಗೆ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ ಮತ್ತು ಗದಗದಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದೆ.

ಜೂನ್ 19 ಮತ್ತು 20 ರ ವೇಳೆಗೆ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ವಾರದ ಮಧ್ಯಭಾಗದವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ವಾರಾಂತ್ಯದವರೆಗೆ ಸಾಧಾರಣ ಮಳೆ ಮುಂದುವರಿಯಬಹುದು. ಜೂನ್ 21 ರಿಂದ ರಾಜ್ಯಾದ್ಯಂತ ಮಳೆ ಕ್ರಮೇಣ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.