ರಾಜ್ಯ

Karnataka: ಮತ್ತೊಂದು ATM ರಾಬರಿ; 27 ಲಕ್ಷ ರೂ ನಗದು ದೋಚಿ ಪರಾರಿ

ಭದ್ರತಾ ಸಿಬ್ಬಂದಿ ಇಲ್ಲದ ಎಸ್‌ಬಿಐ ಎಟಿಎಂ ಗೆ ನುಗ್ಗಿದ ಕೆಲವು ಅಪರಿಚಿತ ದುಷ್ಕರ್ಮಿಗಳು 27 ಲಕ್ಷ ರೂ.ಗೂ ಹೆಚ್ಚು ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Karnataka: ಮತ್ತೊಂದು ATM ರಾಬರಿ; 27 ಲಕ್ಷ ರೂ ನಗದು ದೋಚಿ ಪರಾರಿ
ಸಾಂದರ್ಭಿಕ ಚಿತ್ರ
Published On :

ಕೋಲಾರ: ಕರ್ನಾಟಕದಲ್ಲಿ ಮತ್ತೊಂದು ATM ಕಳ್ಳತನ ವರದಿಯಾಗಿದ್ದು, ಎಟಿಎಂಗೆ ನುಗ್ಗಿದ ದುಷ್ಕರ್ಮಿಗಳು, 27 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ

ಕೋಲಾರ ಜಿಲ್ಲೆಯ ಗುಲ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನ ಜಾವ 4.30 ರ ಸುಮಾರಿಗೆ ಈ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿ ಇಲ್ಲದ ಎಸ್‌ಬಿಐ ಎಟಿಎಂ ಗೆ ನುಗ್ಗಿದ ಕೆಲವು ಅಪರಿಚಿತ ದುಷ್ಕರ್ಮಿಗಳು 27 ಲಕ್ಷ ರೂ.ಗೂ ಹೆಚ್ಚು ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಲ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗಿನ ಜಾವ 4.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಕಾವಲು ಇಲ್ಲದ ಎಟಿಎಂ ಕಿಯೋಸ್ಕ್ ಅನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಎಟಿಎಂ ಮಷಿನ್ ನ ಕ್ಯಾಶ್ ಬಾಕ್ಸ್ ಅನ್ನು ಒಡೆದು ನಗದು ದೋಚಿದ್ದಾರೆ.

ಎಟಿಎಂನಲ್ಲಿದ್ದ ಸಿಸಿಟಿವಿಯಲ್ಲಿ ತಮ್ಮ ಗುರುತು ಮರೆಮಾಚಲು ಸಿಸಿಟಿವಿ ಕ್ಯಾಮೆರಾದ ಮೇಲೆ ಕಪ್ಪು ಬಣ್ಣವನ್ನು ಎರಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂತೆಯೇ ಕಿಯೋಸ್ಕ್‌ನೊಳಗಿನ ಎಚ್ಚರಿಕೆ ವ್ಯವಸ್ಥೆಗಳು ಸಹ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದು ಕಳ್ಳರಿಗೆ ನೆರವಾಗಿದೆ ಎಂದು ಹೇಳಲಾಗಿದೆ.

ಗ್ಯಾಸ್ ಕಟ್ಟರ್‌ಗಳನ್ನು ಬಳಸಿ, ಕಳ್ಳರು ಎಟಿಎಂ ಯಂತ್ರವನ್ನು ಒಡೆದು 27.62 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ತಿಳಿಸಿದ್ದಾರೆ.

"ನಾವು ಪ್ರಕರಣ ದಾಖಲಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.