ರಾಜ್ಯ

ನಂದಿ ಹಿಲ್ಸ್ ಕ್ಯಾಬಿನೆಟ್ ಮೀಟಿಂಗ್ ದಿಢೀರ್ ರದ್ದು; ನಾಳೆ ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ

ದಿನಾಂಕ 19-06-2025 ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನಸೌಧಕ್ಕೆ ಸ್ಥಳಾಂತರಿಸಲಾಗಿದೆ.

ನಂದಿ ಹಿಲ್ಸ್ ಕ್ಯಾಬಿನೆಟ್ ಮೀಟಿಂಗ್ ದಿಢೀರ್ ರದ್ದು; ನಾಳೆ ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ
ವಿಧಾನಸೌಧ
Published On :

ಬೆಂಗಳೂರು: ಐತಿಹಾಸಿಕ ನಂದಿಗಿರಿಧಾಮದಲ್ಲಿ ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಬುಧವಾರ ದಿಢೀರ್ ರದ್ದು ಮಾಡಲಾಗಿದ್ದು, ನಾಳೆ ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.

ಈ ಕುರಿತು ರಾಜ್ಯ ಸರಕಾರ ಇಂದು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ದಿನಾಂಕ 19-06-2025 ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ. ಆದರೆ ಸ್ಥಳಾಂತರಕ್ಕೆ ಯಾವುದೇ ಕಾರಣ ನೀಡಿಲ್ಲ.

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಅಲ್ಲದೆ ಇಂದಿನಿಂದ ಎರಡು ದಿನಗಳ ಕಾಲ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ಸಹ ವಿಧಿಸಿತ್ತು.

ಕಲಬುರಗಿ ಮತ್ತು ಮಲೆ ಮಹದೇಶ್ವರ ಬೆಟ್ಟಗಳಲ್ಲಿ ನಡೆದ ಸಂಪುಟ ಸಭೆಗಳಿಗಿಂತ ಉತ್ತಮವಾಗಿ ನಂದಿ ಗಿರಿದಾಮದಲ್ಲಿ ನಡೆಯುವ ಸಭೆಗಾಗಿ ಅಧಿಕಾರಿಗಳು ಮಹತ್ವದ ಸಿದ್ಧತೆ ಕೈಗೊಂಡಿದ್ದರು. ಆದರೆ ಇದೀಗ ನಂದಿಹಿಲ್ಸ್ ಸಚಿವ ಸಂಪುಟ ಸಭೆ ರದ್ದಾಗಿದೆ.

ಸರ್ಕಾರದ ಪ್ರಕಟಣೆ
ಸರ್ಕಾರದ ಪ್ರಕಟಣೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.