ಹೈಕೋರ್ಟ್ ತೀರ್ಪು ಎಫೆಕ್ಟ್: ಅನರ್ಹಗೊಂಡಿದ್ದ ಜರ್ನಾರ್ದನ ರೆಡ್ಡಿ ಶಾಸಕ ಸ್ಥಾನ ಮರುಸ್ಥಾಪನೆ
ಜನಾರ್ದನ ರೆಡ್ಡಿಗೆ ಜೈಲು ಶಿಕ್ಷೆ ವಿಧಿಸಿದ್ದ ಸಿಬಿಐ ವಿಶೇಷ ಕೋರ್ಟ್ ತೀರ್ಪಿಗೆ ತೆಲಂಗಾಣ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರು ಸ್ಥಾಪಿಸಿದ್ದಾರೆ.

ಬೆಂಗಳೂರು: ಓಬಳಾಪುರಂ ಮೈನಿಂಗ್ ಪ್ರಕರಣದಲ್ಲಿ ಸಿಬಿಐ ವಿಶೇಷ ಕೋರ್ಟ್ ನಿಂದ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ಗಾಲಿ ಜರ್ನಾದನ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಲಾಗಿದೆ.
ಜನಾರ್ದನ ರೆಡ್ಡಿಗೆ ಜೈಲು ಶಿಕ್ಷೆ ವಿಧಿಸಿದ್ದ ಸಿಬಿಐ ವಿಶೇಷ ಕೋರ್ಟ್ ತೀರ್ಪಿಗೆ ತೆಲಂಗಾಣ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರು ಸ್ಥಾಪಿಸಿದ್ದಾರೆ.
ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು. ನಿಯಮದಂತೆ ಏಳು ವರ್ಷ ಜೈಲು ಶಿಕ್ಷೆ ಹಿನ್ನೆಲೆಯಲ್ಲಿ ರೆಡ್ಡಿ ಶಾಸಕ ಸ್ಥಾನ ರದ್ದುಗೊಂಡಿತ್ತು.

ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ
ಆದರೆ ಸಿಬಿಐ ವಿಶೇಷ ಕೋರ್ಟ್ ತೀರ್ಪು ಪ್ರಶ್ನಿಸಿ ಜನಾರ್ದನ ರೆಡ್ಡಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್ ಈ ಶಿಕ್ಷೆಗೆ ತಡೆ ನೀಡಿದೆ. ಅಷ್ಟೇ ಅಲ್ಲದೆ, ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿಯವರಿಗೆ ಜಾಮೀನು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


